ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ತನಿಕೆ ಸಿಬಿಐಗೆ ವಹಿಸಲಿ: ಡಿ.ಕೆ ಶಿವಕುಮಾರ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಯಡಮೊಗೆಯಲ್ಲಿ ಇತ್ತೀಚಿಗೆ ಕೊಲೆಯಾದ ಯಡಮೊಗೆ ಉದಯ್ ಗಾಣಿಗ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಕುಟುಂಬಿಕರಿಗೆ ಸಾಂತ್ವಾನ ಹೇಳಿದರು.

Call us

Call us

Call us

ಕಾಂಗ್ರೆಸ್ ಪಕ್ಷದಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉದಯ್ ಗಾಣಿಗ ಅವರದ್ದು ಒಂದೇ ಕೊಲೆಯಲ್ಲ, ಹಲವು ಕೊಲೆಗಳು ಆಗಿವೆ ಎಲ್ಲ ಕೊಲೆಗಳನ್ನು ಮುಚ್ಚಿ ಹಾಕುವ ದೊಡ್ಡ ಪ್ರಯತ್ನ ನಡೆಯುತ್ತಿದೆ. ಬೇರೆ ಕೊಲೆಗಳು ನಡೆದಾಗ ಸಿಬಿಐಗೆ ವಹಿಸಿದ್ದಾರೆ ಇದನ್ನು ಕೂಡ ಸಿಬಿಐಗೆ ವಹಿಸಿ, ಸಾವಿಗೆ ನ್ಯಾಯ ದೊರಕಿಸಿ ಕೊಡಿ ಉದಯ್ ಗಾಣಿಗ ಬಿಜೆಪಿ ಪಕ್ಷಕ್ಕೆ, ಬೆಳಗ್ಗೆ ಸಂಜೆ ದುಡಿದಿದ್ದಾನೆ ಅಂತ ಹೆಣ್ಣು ಮಗಳು ಹೇಳುತ್ತಾಳೆ ಕೊಲೆ ಮಾಡಿದ್ದು, ಬಿಜೆಪಿಯ ಪಂಚಾಯತ್ ಅಧ್ಯಕ್ಷನೇ ಅಂತ ಹೇಳಿದ್ದಾಳೆ ನ್ಯಾಯ ಒದಗಿಸಿ, ಕುಟುಂಬಕ್ಕೆ ಸೂಕ್ತ ಒದಗಿಸಬೇಕು ಈ ಬಗ್ಗೆ ವಿಧಾನಸಭೆಯಲ್ಲಿ ಹೋರಾಟ ಮಾಡುತ್ತೇವೆ ಸಿಎಂ, ಗೃಹ ಸಚಿವರಲ್ಲಿ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದರು.

Call us

Call us

ಈ ಸಂದರ್ಭ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಕಾಂಗ್ರೇಸ್ ಜಿಲ್ಲಾ ಮುಖಂಡರಾದ ಎಸ್. ರಾಜು ಪೂಜಾರಿ, ಪಿ. ಕಿಶನ್ ಹೆಗ್ಡೆ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಗಾಣಿಗ ಸೇವಾ ಸಂಘದ ಎಸ್. ವೀರಭದ್ರ ಗಾಣಿಗ ಹಾಲಂಬೇರು, ವಿಜಯ ಗಾಣಿಗ ಹಾಲಂಬೇರು ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:
► ಯಡಮೊಗೆ ಕೊಲೆ ಪ್ರಕರಣ: ಒಟ್ಟು 6 ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ – https://kundapraa.com/?p=49133 .
► ಯಡಮೊಗೆಯ ಉದಯ ಗಾಣಿಗರ ಕುಟುಂಬಕ್ಕೆ ಬೈಂದೂರು ಮಂಡಲ ಬಿಜೆಪಿಯಿಂದ ನೆರವು – https://kundapraa.com/?p=49312 .
► ಉದಯ ಗಾಣಿಗ ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಆಗ್ರಹ – https://kundapraa.com/?p=49029 .
► ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೆ. ಗೋಪಾಲ ಪೂಜಾರಿ ಆಗ್ರಹ – https://kundapraa.com/?p=49022 .
► ಯಡಮೊಗೆ ಕೊಲೆ ಪ್ರಕರಣ. ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸರ ವಶಕ್ಕೆ – https://kundapraa.com/?p=48994 .
► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 .

Leave a Reply

Your email address will not be published. Required fields are marked *

eight − three =