ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ ಭಂಡಾರಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೆ.ಪಿ.ಸಿ.ಸಿ. ನೂತನ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರರವರು, ಆಯ್ಕೆಯಾದ ನಂತರ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದ್ದು ಮುಂದಿನ ಸ್ಥಳಿಯಾಡಳಿತ ಚುನಾವಣೆಯನ್ನು ಪಕ್ಷ ಸಮರ್ಥವಾಗಿ ಎದುರಿಸಲಿದೆ ಎಂದರು .
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ನೂತನ ಅಧ್ಯಕ್ಷರ ಪದಗ್ರಹಣ ಕುರಿತು ಕುಂದಾಪುರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಅಧ್ಯಕ್ಷತೆ ವಹಿಸಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಕುಮಾರ ಕೊಡವೂರು , ಪ್ರಧಾನ ಕಾರ್ಯದರ್ಶಿಗಳಾದ ಕಿಶನ್ ಹೆಗ್ಡೆ, ಪ್ರಸನ್ನ ಕುಮಾರ ಶೆಟ್ಟಿ ಬಿ. ಹಿರಿಯಣ್ಣ , ಮಲ್ಯಾಡಿ ಶಿವರಾಮ ಶೆಟ್ಟಿ ದೇವಕಿ , ಮುರಳಿ ಶೆಟ್ಟಿ , ನವೀನ್ ಡಿ ಸೊಜಾ ದಿನೇಶ ಪುತ್ರನ್ ಅಣ್ಣಯ್ಯ ಶೇರಿಗಾರ್, ವಿಶ್ವಾಸ ಅಮೀನ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ , ವಿಕಾಸ ಹೆಗ್ಡೆ ,ಚಂದ್ರ ಶೇಖರ ಖಾರ್ವಿ ,ಚಂದ್ರಶೇಖರ ಶೆಟ್ಟಿ ಯೋಗಿಶ್ ಇನ್ನಾ ,ಪ್ರಭಾಕರ ಆಚಾರ್ಯ, ಸಂಪತ ರಟ್ಟಾಡಿ ಕುಮಾರ ಖಾರ್ವಿ, ಸುನೀಲ ಪೂಜಾರಿ , ರೋಶನ್ ಶೆಟ್ಟಿ , ಉಪೆoದ್ರ ಗಾಣಿಗ ಉಪಸ್ಥಿತರಿದ್ದರು. ವಿನೋದ ಕ್ರಾಸ್ತಾ ಸ್ವಾಗತಿಸಿ ನಾರಾಯಣ ಆಚಾರ್ ವಂದಿಸಿದರು.
ಇದನ್ನೂ ಓದಿ:
► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38518 .
► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ – https://kundapraa.com/?p=38485 .
► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .
► ಮನೆಯಲ್ಲಿಯೇ ಕುಳಿತು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯುವ ನೂತನ ಯೋಜನೆ ಜಾರಿ – https://kundapraa.com/?p=38501 .