ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶನಿವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ದೇವಸ್ಥಾನದ ಆಡಳಿತ ಧರ್ಮದರ್ಶಿ ಶೆಟ್ಟಿಪಾಲ್ ಸಚ್ಚಿದಾನಂದ ಚಾತ್ರ ಅವರು ಶಿ.ಕೆ. ಶಿವಕುಮಾರ್ ಅವರನ್ನು ಗೌರವಿಸಿದರು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಯು. ಆರ್. ಸಭಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಎಸ್ ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಮೊದಲಾದವರು ಇದ್ದರು.