ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ಶೇ 15% ಡಿವಿಡೆಂಡ್ ಘೋಷಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 44ನೇ ವಾರ್ಷಿಕ ಮಹಾಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು.

Call us

Call us

Call us

ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 44 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.750 ಕೋಟಿ ವ್ಯವಹಾರ ನಡೆಸಿ, ರೂ 4.47 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ. ಸತತ 17 ವರ್ಷಗಳಿಂದ ‘ಎ’ ವರ್ಗದ ಆಡಿಟ್ ವರ್ಗೀಕರಣದಲ್ಲಿದೆ ಎಂದು ಹೇಳಿದರು.

Call us

Call us

ಸಂಘವು ವರ್ಷದಲ್ಲಿ ರೂ. 163.90 ಕೋಟಿ ಠೇವಣಿ ಸಂಗ್ರಹಿಸಿ, ರೂ. 146.13 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 75.60 ಕೋಟಿ ಹೂಡಿಕೆ ಮಾಡಿದೆ. ಸಂಘದ ಸದಸ್ಯರಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಕೃಷಿ ಪೂರಕ ಮಾಹಿತಿ ಕಾರ್ಯಕ್ರಮ, ತರಬೇತಿ, ಕೃಷಿ ಅಧ್ಯಯನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ರೈತ ದಿನಾಚರಣೆ, ರೈತಸಿರಿ ಗೌರವಾರ್ಪಣೆ, ಕೃಷಿ ಪೂರಕ ಚಟುವಟಿಕೆಗಳಿಗೆ ಉತ್ತೇಜನ, ತಂತ್ರಜ್ಞಾನ ಉನ್ನತೀಕರಣ ಮೊದಲಾದ ಕಾರ್ಯಗಳನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದರು.

ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಬಿ. ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ್, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ, ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭ ಸಂಘದ 10 ಮಂದಿ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಕಾರ್ಯಕ್ರಮ ನಿರ್ವಹಿಸಿದರು. ಅರುಣ ಪ್ರಾರ್ಥಿಸಿ, ನಾಗರತ್ನ ಸನ್ಮಾನಿತರ ಯಾದಿ ವಾಚಿಸಿದರು. ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

3 + six =