ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಕೊರೋನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಬೈಂದೂರು ಪೊಲೀಸ್ ವೃತ್ತದ ಠಾಣೆಗಳಿಗೆ ಸೋಮವಾರ ಕೊರೋನಾ ರಕ್ಷಣಾ ಕಿಟ್ ವಿತರಿಸಲಾಯಿತು.
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ವೃತ್ತ ನಿರೀಕ್ಷಕರಾದ ಸಂತೋಷ್ ಎ. ಕಾಯ್ಕಿಣಿ ಅವರಿಗೆ ಕಿಟ್ ಹಸ್ತಾಂತರಿಸಿದರು. ಈ ಸಂದರ್ಭ ಪ್ರೊಬೇಷನರಿ ಪಿ.ಎಸ್.ಐ ಸುಹಾಸ್, ಸಂಘದ ನಿರ್ದೇಶಕರಾದ ಈಶ್ವರ ಹಕ್ಲತೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ, ಮ್ಯಾನೇಜರ್ ಚಂದ್ರಯ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
► ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ವೈದ್ಯಕೀಯ ಕಿಟ್ ದೇಣಿಗೆ – https://kundapraa.com/?p=48148 .