ಕುಂದಾಪುರ: ನಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಡು ರಸ್ತೆಯಲ್ಲಿ ಹಾಡಹಗಲೇ ರಾಜಾರೋಷವಾಗಿ ಹೊಡೆದಾಟಕ್ಕೆ ನಿಂತ ವಿದ್ಯಾರ್ಥಿಗಳ ದಂಡು, ಇಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಹಲ್ಲೆಗೊಳಗಾದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಂಡಾರ್‌ಕಾರ‍್ಸ್ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಗಣೇಶ್ ಹಾಗೂ ಬೇರೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಅಂತಿಮ ಬಿಕಾಂ ವಿದ್ಯಾರ್ಥಿ ಮಿಥುನ್ ಹಾಗೂ ದ್ವಿತೀಯ ಬಿಬಿಎಂ ವಿದ್ಯಾರ್ಥಿ ಅಕ್ಷಯ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದು, ಇಬ್ಬರು ಗಂಭೀರ ಗಾಯಗೊಂಡು, ಹೊಡೆದಾಟ ತಪ್ಪಿಸಲು ಹೋದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

Call us

Call us

Visit Now

ವಿದ್ಯಾರ್ಥಿಗಳು ನೋಡನೋಡುತ್ತಿದ್ದಂತೆಯೇ ಸಿನಿಮೀಯ ಮಾದರಿಯಲ್ಲಿ ಗಂಭೀರ ಹಲ್ಲೆ ನಡೆಸಿದ್ದು, ಸಿಕ್ಕಸಿಕ್ಕ ಕಡೆ ಹೊಡೆದಿದ್ದಾರೆ. ಇದೇ ಸಂದರ್ಭ ಸ್ಥಳಕ್ಕೆ ಬಂದ ಕುಂದಾಪುರ ಪುರಸಭೆಯ ಸದಸ್ಯ ಗಿರೀಶ್ ಜಿ.ಕೆ ಅವರು ಹೊಡೆದಾಟ ಬಿಡಿಸಲು ಹೋದಾಗ ಅವರಿಗೂ ಹಲ್ಲೆಗೆ ಮುಂದಾದ ತಂಡ ಅವರ ಕಾರಿನ ಕೀ ಕಿತ್ತುಕೊಂಡಿದ್ದಾರೆ. ಆದರೆ ಸ್ಥಳೀಯರು ಒಟ್ಟಾಗುತ್ತಿದ್ದಂತೆ ದುಷ್ಕರ್ಮಿ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಿಥುನ್ ಅವರ ತಲೆ, ಕಾಲು ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಅಕ್ಷಯ್ ಅವರ ಕಾಲಿಗೆ ಗಾಯಗಳಾಗಿವೆ. ಹಲ್ಲೆಗೆ ಕಾಲೇಜಿನ ಪೂರ್ವ ದ್ವೇಷವೇ ಕಾರಣವೆನ್ನಲಾಗಿದ್ದು, ದ್ವೇಷಕ್ಕೆ ಕಾರಣ ತಿಳಿದು ಬಂದಿಲ್ಲ. ಗಂಭೀರ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳು ಕುಂದಾಪುರ ಸರ್ಕಾರೀ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Click here

Call us

Call us

 

ಗಣೇಶ್ ಹಾಗೂ ಮಿಥುನ್ ಮತ್ತು ಅಕ್ಷಯ ನಡುವೆ ಮೊದಲಿನಿಂದಲೂ ವೈಷಮ್ಯವಿತ್ತು. ಗಣೇಶ್‌ಗೆ ಈ ಹಿಂದೆ ಅಕ್ಷಯ್ ಮತ್ತು ಮಿಥುನ್ ತಂಡದಿಂದ ಹಲ್ಲೆ ನಡೆದಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ದ್ವೇಷ ಸಾಧಿಸುತ್ತಿದ್ದ ಗಣೇಶ್ ತನ್ನ ಸ್ನೇಹಿತರಾದ ನಾಡಾ ಗುಡ್ಡೆಯಂಗಡಿ ಪ್ರದೇಶದ ಕಾಲೇಜೊಂದರ ವಿದ್ಯಾರ್ಥಿಗಳ ಸಹಾಯ ಕೇಳಿದ್ದ. ಸೋಮವಾರ ಮಧ್ಯಾಹ್ನ ಊಟದ ಸಮಯಕ್ಕೆ ಮಿಥುನ್ ಮತ್ತು ಅಕ್ಷಯ್ ಹಾಗೂ ಅವರ ಸ್ನೇಹಿತರು ಕಾಲೇಜು ಕ್ಯಾಂಪಸ್ಸಿನಿಂದ ಹೊರ ಬಂದಿದ್ದರು. ಇದೇ ಸಂದರ್ಭ ಬೈಕಿನಲ್ಲಿ ಬಂದು ಕಾದು ಕುಳಿತಿದ್ದ ಗಣೇಶ್ ಹಾಗೂ ಆತನ ಹತ್ತು ಜನ ಸ್ನೇಹಿತರು ಗಾಂಧೀ ಮೈದಾನದ ಎದುರುಗಡೆ ರಸ್ತೆಯಲ್ಲಿ ಮಿಥುನ್ ಹಾಗೂ ಅಕ್ಷಯ ಮೇಲೆ ಕಬ್ಬಿಣದ ರಾಡಿನಿಂದ ಏಕಾಏಕೀ ಹಲ್ಲೆ ನಡೆಸಿದ್ದಾರೆ.

ಕುಂದಾಪುರ ಠಾಣೆಯಲ್ಲಿ ಕಾರಿನ ಕೀ ಕಳವು ಮತ್ತು ವಿದ್ಯಾರ್ಥಿಗಳಿಗೆ ಮಾರಣಾಂತಿಕ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲಿಸರು ಬಲೆ ಬೀಸಿದ್ದಾರೆ.

Video:

 

Leave a Reply

Your email address will not be published. Required fields are marked *

15 − 5 =