ಕುಂದಾಪುರ ಮೂಲದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕುಂದಾಪುರ ಮೂಲದ ಕಾಶಿನಾಥ್ ಅವರು ಗುರುವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಶಿನಾಥ್ ಅವರನ್ನು 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

Call us

Call us

Click Here

Visit Now

ಕುಂದಾಪುರ ಕೋಣಿ ಮೂಲದ ಬ್ರಾಹ್ಮಣ ಕುಟುಂಬಕ್ಕೆ ಸೇರಿದ್ದ ಕಾಶಿನಾಥ್ ಒಬ್ಬ ನಟನಾಗಿ, ನಿರ್ದೇಶಕರಾಗಿ ತಮ್ಮದೇ ಆದ ಛಾಪು ಮೂಡಿಸಿದಂತಹ ಪ್ರತಿಭಾವಂತ ವ್ಯಕ್ತಿ. ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪದವಿ ಮುಗಿಸಿದ ಬಳಿಕ ಅಸೀಮಾ ಎಂಬ ಚಿತ್ರತಂಡವನ್ನು ಸೇರಿಕೊಂಡ ಕಾಶಿನಾಥ್ ಅವರು ಸುರೇಶ್ ಹೆಬ್ಳೀಕರ್ ಅವರ ಗರಡಿಯಲ್ಲಿ ಪಳಗಿದರು. 1975 ರಲ್ಲಿ ಅಪರೂಪದ ಅತಿಥಿ ಚಿತ್ರವನ್ನು ನಿರ್ದೇಶಿಸಿ ಹೊಸತನವನ್ನು ಕನ್ನಡ ಚಿತ್ರರಂಗಕ್ಕೆ ತೋರಿಸಿಕೊಟ್ಟರು. 1978 ರಲ್ಲಿ ಕಾಶಿನಾಥ್ ನಿರ್ದೇಶಿಸಿದ್ದ ಸಸ್ಪೆನ್ಸ್ ಥ್ರಿಲ್ಲರ್ ‘ಅಪರಿಚಿತ’ ಚಿತ್ರ ಭರ್ಜರಿ ಯಶಸ್ವಿಯಾಗಿತ್ತು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಹುಟ್ಟು ಹಾಕಿತ್ತು. 1984 ರಲ್ಲಿ ಕಾಶಿನಾಥ್ ಅವರು ನಾಯಕನಾಗಿ ನಟಿಸಿದ್ದ ಮೊದಲ ಚಿತ್ರ ‘ಅನುಭವ’ ಭರ್ಜರಿ ಯಶಸ್ವಿಯಾಗಿದೆ. ಚಿತ್ರದಲ್ಲಿ ಉಮಾಶ್ರೀ ಮತ್ತು ಅಭಿನನಯ ಅವರು ನಾಯಕಿಯರಾಗಿ ನಟಿಸಿದ್ದರು.ಮರಿಯಲ್ ಸ್ಟಾರ್ ಉಪೇಂದ್ರ,ಸಂಗೀತ ನಿರ್ದೇಶಕ ವಿ.ಮನೋಹರ್, ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸೇರಿದಂತೆ ಅನೇಕ ದಿಗ್ಗಜರು ಕಾಶಿನಾಥ್ ಅವರ ಶಿಷ್ಯರಾಗಿದ್ದಾರೆ. ‘ಅವಳೇ ನನ್ನ ಹೆಂಡ್ತಿ’, ‘ಹೆಂಡ್ತಿ ಎಂದರೆ ಹ್ಯಾಗಿರಬೇಕು’ ಮೊದಲಾದ ಸೂಪರ್ ಹಿಟ್ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದ ಕಾಶಿನಾಥ್ ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದರು. 1988 ರಲ್ಲಿ ಬಿಡುಗಡೆಯಾಗಿದ್ದ ‘ಅವಳೇ ನನ್ನ ಹೆಂಡ್ತಿ’ ಚಿತ್ರ ಹಿಂದಿಗೂ ರಿಮೇಕ್ ಆಗಿತ್ತು. ಹಿಂದಿಯಲ್ಲಿ ಅಮೀರ್ ಖಾನ್ ಮತ್ತು ಫರಾ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇವರ ಚಿತ್ರಗಳಲ್ಲಿನ ದ್ವಂದ್ವ ಅರ್ಥದ ಡೈಲಾಗ್ಗಳಿಗೆ ಸಂಪ್ರದಾಯವಾದಿಗಳು ಮೂಗು ಮುರಿಯುತ್ತಿದ್ದರೂ, ಹಲವು ಚಿತ್ರಗಳು ಸೂಪರ್ ಹಿಟ್ ಆಗಿದ್ದವು.

Click here

Click Here

Call us

Call us

ಉಪೇಂದ್ರ, ಮನೋಹರ್, ಸುನಿಲ್ ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದ ಕಾಶಿನಾಥ್ ಅವರು ತಮ್ಮ ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ಕೈಚಳಕ ತೋರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ ಚಿತ್ರಗಳು ಕಾಶಿನಾಥ್ ಅವರ ಪ್ರಮುಖ ಚಿತ್ರಗಳಾಗಿದ್ದು, ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯತೆಯನ್ನು ಗಳಿಸಿತ್ತು.11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರ ನಿರ್ಮಾಣ ಮಾಡಿದ್ದರು. 80ರ ದಶಕದ ಸ್ಯಾಂಡಲ್ವುಡ್ನ ಜನಪ್ರಿಯ ನಟ ಹಾಗೂ ನಿರ್ದೇಶಕರಾಗಿದ್ದರು. ಇತ್ತೀಚಿನ ಚೌಕ ಸಿನಿಮಾ ಕಾಶಿನಾಥ್ ಅವರ ಕೊನೆಯ ಸಿನಿಮಾ.

ಕಾಶಿನಾಥ್ ಅವರು ಪುತ್ರ ನಟ ಅಲೋಕ್ ಕಾಶಿನಾಥ್ ಮತ್ತು ಪುತ್ರಿ ಅಮೃತವರ್ಷಿಣಿ ಅವರನ್ನು ಅಲಿದ್ದಾರೆ. ಕಾಶಿನಾಥ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಮತ್ತು ಲಕ್ಷಾಂತರ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

9 + 2 =