ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ಉಡುಪಿ ಹಾಗೂ ಸಹಕಾರ ಇಲಾಖೆ ಜಂಟಿಯಾಗಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019ರ ಕಾರ್ಯಕ್ರಮದಲ್ಲಿ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಕುಂದಾಪುರ ಈ ಸಂಸ್ಥೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಜಾನ್ಸನ್ ಡಿಅಲ್ಮೇಡಾ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಸ್ಕಲ್ ಡಿಸೋಜಾ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್. ಗಂಗಣ್ಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ಎಸ್. ರಾಜು ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.