ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಂಬೈ ಹಾಗೂ ಇತರೆ ರಾಜ್ಯಗಳಿಂದ ಉಡುಪಿ ಜಿಲ್ಲೆಯ ಗಡಿ ಪ್ರವೇಶಿಸುತ್ತಿರುವ ನಾಗರಿಕರಿಗೆ ಕೋವಿಡ್-19 ತಪಾಸಣಾ ಕೇಂದ್ರದಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಗುರುವಾರ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು.
ಹೊರ ರಾಜ್ಯಗಳಿಂದ ಬಂದವರಿಗೆ ಶೀಘ್ರ ತಪಾಸಣೆ ಹಾಗೂ ಮಾಹಿತಿಯನ್ನು ದಾಖಲಿಸಿಕೊಂಡು ಕ್ವಾರೈಂಟನ್ ಕೇಂದ್ರ ತಲುಪಲು ಅನುವು ಮಾಡಿಕೊಡಿ ಮತ್ತು ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಮುಂಬೈನಲ್ಲಿರುವ ಶಿರೂರು ಹೊಸ್ಮನೆ ಶ್ರೀನಿವಾಸ ಶೆಟ್ಟಿಯವರು ಮುಂಬೈನಿಂದ ಬರುವರಿಗಾಗಿ ಬಿಸ್ಕೆಟ್ ಹಾಗೂ ನೀರಿನ ಬಾಟೆಲ್ ವ್ಯವಸ್ಥೆ ಮಾಡಲು ನೀಡಿರುವ ಚೆಕ್ಕನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಇದನ್ನೂ ಓದಿ:
► ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ 5 ಮಂದಿಗೆ ಕೊರೋನಾ ಪಾಸಿಟಿವ್ – https://kundapraa.com/?p=37564 .
► ಶಿರೂರು ತಪಾಸಣಾ ಕೇಂದ್ರಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಭೇಟಿ – https://kundapraa.com/?p=37575 .