ಕುಂದಾಪುರ ವಕೀಲರ ಸಂಘದಿಂದ ರ‍್ಯಾಂಕ್ ಪಡೆದ ಅಕ್ಷಯ್ ರಾವ್‌ಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಕುಂದಾಪುರ ಬಾರ್ ಅಸೋಸಿಯೇಶನ್ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ನ್ಯಾಯವಾದಿ ಗುರುಮೂರ್ತಿ ರಾವ್ ಅವರ ಪುತ್ರ, ಕುಂದಾಪುರ ಆರ್‌ಎನ್‌ಎಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಕ್ಷಯ್ ಜಿ. ರಾವ್ ಅವರನ್ನು ಸನ್ಮಾನಿಸಲಾಯಿತು.

Call us

Call us

Call us

ಕುಂದಾಪುರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ವಿ. ಪಾಟೀಲ್ ಸನ್ಮಾನಿಸಿ ಮಾತನಾಡಿದರು. ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಶೀನಿವಾಸ ಸುವರ್ಣ, ನ್ಯಾಯಾಧೀಶರಾದ ಪ್ರೀತ್ ಜೆ, ಲಾವಣ್ಯ ಚಂದ್ರಶೇಖರ್ ಬಣಕಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ವಂದಿಸಿದರು. ಸಂತೋಷ್ ವಿದ್ಯಾರ್ಥಿಯ ಪರಿಚಯ ಪತ್ರ ವಾಚಿಸಿದರು. ನ್ಯಾಯವಾದಿ ರಾಘವೇಂದ್ರ ಚರಣ ನಾವಡ ಕಾರ್ಯಕ್ರಮ ನಿರ್ವಹಿಸಿದರು.

Call us

Call us

Kundapura Bar Association honored Akshay G . Rao (1) Kundapura Bar Association honored Akshay G . Rao (2) Kundapura Bar Association honored Akshay G . Rao (3)

Leave a Reply

Your email address will not be published. Required fields are marked *

1 × 2 =