ಸರಕಾರದ ಸಾಧನೆ ಪ್ರಚುರಪಡಿಸಲು, ಜನರ ಭಾವನೆ ತಿಳಿಯಲು ಮನೆ ಮನೆ ಕಾಂಗ್ರೆಸ್ ಕೊಂಡಿ

Call us

Call us

ಕುಂದಾಪುರ ವಿಧಾನಸಭಾ ಕ್ಷೇತ್ರ ಇಂಟೆಕ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಅಭಿಮತ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದು, ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಸರಕಾರದ ಕಾರ್ಯಕ್ರಮ ಹಾಗೂ ಸಾಧನೆಗಳನ್ನು ಜನರ ಮುಂದೆ ತೆರೆದಿಡುವ ಜೊತೆಗೆ ಜನರ ಸಮಸ್ಯೆ ಹಾಗೂ ಅಭಿಪ್ರಾಯವನ್ನು ಕ್ರೊಢೀಕರಿಸುವ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಹೇಳಿದರು.

Call us

Call us

ಅವರು ಇಲ್ಲಿನ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಜರುಗಿದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಟೆಕ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷ ಅಸ್ತಿತ್ವವನ್ನು ಕಂಡುಕೊಳ್ಳಬೆಕಿದ್ದರೆ ಅಭ್ಯರ್ಥಿ ಗೆಲ್ಲಬೇಕು. ಇಲ್ಲವೇ ಗೆಲ್ಲಿಸಬೇಕು, ಗೆಲ್ಲುವವರಿಗೆ ಬಿಟ್ಟುಕೊಡಬೇಕು. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲವ ಅಭ್ಯರ್ಥಿಗೆ ಜೊತೆಯಾಗಿ ನಿಂತು ಸಂಘಟಿತವಾಗಿ ಶ್ರಮಿಸಬೇಕಿದೆ ಎಂದವರು ಹೇಳಿದರು.

ಕರ್ನಾಟಕ ರಾಜ್ಯ ಇಂಟೆಕ್ ಅಧ್ಯಕ್ಷ ರಾಕೇಶ್ ಮಲ್ಲಿ ಮಾತನಾಡಿ ಇಂಟೆಕ್ ಸಂಘಟನೆ ಪ್ರಪಂಚದಲ್ಲಿಯೇ ಅತಿಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಸಂಘಟನೆಯಾಗಿದ್ದು ಕಾರ್ಮಿಕರ ಹಿತರಕ್ಷಣೆಗಾಗಿ ಶ್ರಮಿಸುತ್ತಿದೆ. ರಾಜ್ಯ ಸರಕಾರ ದುಡಿಯುವ ವರ್ಗದವರಿಗಾಗಿ ನೀಡಿರುವ ಹತ್ತಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳ್ಳುವಂತೆ ಮಾಡಿ ಪ್ರತಿಯೊಬ್ಬರಿಗೂ ಸರಕಾರದ ಸವಲತ್ತುಗಳ ಪ್ರಯೋಜನ ದೊರೆಯುವಂತೆ ಮಾಡಲು ಸಂಘಟನೆ ಕಟಿಬದ್ಧವಾಗಿದೆ. ಕಾರ್ಮಿಕರ ಹಿತರಕ್ಷಣೆಯಾದರೆ ವ್ಯಕ್ತಿ, ಸರಕಾರ ಉಳಿಯಬಲ್ಲದು. ಈ ಭಾರಿ ರಾಜ್ಯದ ಕಾರ್ಮಿಕರು ಮತ್ತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ ಬಾವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕಾರ್ಮಿಕರ ರಕ್ಷಣೆಗಾಗಿ ಹುಟ್ಟಿಕೊಂಡ ಸಂಸ್ಥೆ ಇಂದು ದೊಡ್ಡ ಮಟ್ಟದಲ್ಲಿ ಬೆಳೆದು ಗುರುತಿಸಿಕೊಂಡಿದೆ. ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ನಿರಂತರವಾಗಿ ಹೋರಾಟಗಳನ್ನು ಸಂಘಟಿಸಿದೆ ಎಂದರು.

ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ, ಅಲ್ಪಸಂಖ್ಯಾತರ ನಿಗಮದ ಅದ್ಯಕ್ಷ ಎಂ. ಎ ಗಪೂರ್, ಕೆಪಿಸಿಸಿ ಕಾರ್ಯದರ್ಶಿ ಎಂ. ಎಸ್ ಮೊಹಮ್ಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ತೋನ್ಸೆ, ಉಪಾಧ್ಯಕ್ಷರಾದ ಎಸ್. ರಾಜು ಪೂಜಾರಿ, ಮುನಿಯಾಲು ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕ ಬಸವರಾಜ್, ರಾಜ್ಯ ಇಂಟೆಕ್ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ವೆಂಕಟೇಶ್, ಮಹಿಳಾ ಇಂಟೆಕ್ ಅಧ್ಯಕ್ಷೆ ಬಿ. ತಾರಾ ಚಂದನ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ ಕುಂದರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಗೌರಿ ದೇವಾಡಿಗ, ಜ್ಯೋತಿ ಎಂ, ಕುಂದಾಪುರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ವಿ ಪುತ್ರನ್, ಯುವ ಕಾಂಗ್ರೆಸ್ ಅದ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರುಗಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರುಗಳ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

two × five =