ಕುಂದಾಪುರ: ಪಿಯು ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಅಸ್ತ್ರ! ಮುಗಿಯದ ವಿವಾದ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ.ಫೆ.2:
ಕುಂದಾಪುರದ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಸ್ಕಾರ್ಫ್ (ಹಿಜಾಬ್) ಧರಿಸುವುದನ್ನು ವಿರೋಧಿಸಿ, ಹಿಂದೂ ಸಮುದಾಯದ ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ತೆರಳಿರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ಘಟನೆಯನ್ನು ತಿಳಿಗೊಳಿಸಲು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರ ಪೋಷಕರ ಸಭೆ ಫಲಪ್ರದವಾಗಿಲ್ಲ.

Call us

Call us

ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಒಂದಷ್ಟು ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದನ್ನು ವಿರೋಧಿಸಿ ಮತ್ತೊಂದಷ್ಟು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ತೆರಳಿದ್ದರು. ಸುಮಾರು 28 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸುತ್ತಿದ್ದು ಇಂದು 100ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಪರಿಸ್ಥಿತಿ ವಿಕೋಪಕ್ಕೆ ಬರುವ ಲಕ್ಷಣಗಳು ಕಾಣುತ್ತಲೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಕರಣವನ್ನು ಸುಖಾಂತ್ಯಗೊಳಿಸಲು ಖುದ್ದು ಕಾಲೇಜಿಗೆ ಭೇಟಿ ನೀಡಿದ್ದರು. ಕೇಸರಿ ಶಾಲು ತೆಗೆಯಬೇಕಿದ್ದರೆ, ಹಿಜಾಬ್ ಕೂಡ ಧರಿಸಬಾರದು ಎಂದು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಹಿಜಾಬ್ ಕುರಿತಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಜತೆ ಸುಮಾರು ಒಂದೂವರೆ ಗಂಟೆಗಳ ಕಾಲ ಶಾಸಕರು ಮಾತುಕತೆ ನಡೆಸಿದ್ದು, ಹಿಜಾಬ್ ಧರಿಸುವುದು ನಮ್ಮ ಪದ್ಧತಿ ಎಂದು ಪೋಷಕರು ಪಟ್ಟು ಹಿಡಿದರು.

Call us

Call us

ಕಾಲೇಜಿನಲ್ಲಿ ಸಮವಸ್ತ್ರ ಧರಿಸುವ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ ನೀಡಿದ್ದು, ಸಮವಸ್ತ್ರದ ಮೇಲೆ ಇತರ ವಸ್ತ್ರ ಧರಿಸಿದರೆ ಕಾಲೇಜು ಆವರಣದೊಳಗೆ ಪ್ರವೇಶ ಇಲ್ಲ. ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ನಾಳೆಯಿಂದ ಎರಡೂ ಸಮುದಾಯದ ವಿದ್ಯಾರ್ಥಿಗಳು ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎಂದು ಕಾಲೇಜು ಆಡಳಿತ ತಿಳಿಸಿದೆ.

ಉಡುಪಿಯ ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಎದ್ದಿರುವ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಇದರ ನಡುವೆ ಕುಂದಾಪುರದಲ್ಲಿ ಇನ್ನೊಂದು ಪ್ರಕರಣ ಮುನ್ನೆಲೆಗೆ ಬಂದಂತಾಗಿದೆ.

Leave a Reply

Your email address will not be published. Required fields are marked *

five + ten =