ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ: ಕ್ಯಾಲೆಂಡರ್ ಬಿಡುಗಡೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕಳೆದ 7 ವರ್ಷಗಳಿಂದ ರಾಜ್ಯದಲ್ಲಿಯೇ ವಿಶಿಷ್ಠವಾದ ದಿನದರ್ಶಿಕೆ ತಯಾರಿಸಿ, ಬಿಡುಗಡೆಗೊಳಿಸುತ್ತಿರುವ ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ‍್ಯ ಸ್ತುತ್ಯರ್ಹ. ಕ್ಯಾಲೆಂಡರ್ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಗೊಳಿಸುವುದು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಉತ್ತಮ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರಿತ ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸುವುದು ಉಳಿದ ಸಂಘಗಳಿಗೆ ಮಾದರಿ. 2020ರ ದಿನದರ್ಶಿಕೆಯಲ್ಲಿ ಶಿಕ್ಷಕರಿಗೆ ಅಗತ್ಯವಾದ ಎಲ್ಲಾ ಮಾಹಿತಿಗಳಿದ್ದು ಶಿಕ್ಷಕರಿಗೆ ಬಹಳ ಉಪಯುಕ್ತವಾಗಿದೆ ಎಂದು ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ ಹೇಳಿದರು.

Call us

Call us

Visit Now

ಅವರು ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೦ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

Click here

Call us

Call us

ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ದಿನಕರ ಶೆಟ್ಟಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ ಕುಮಾರ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸದಾನಂದ ಬೈಂದೂರು, ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಮೋಹನರಾವ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸೂರಪ್ಪ ಹೆಗ್ಡೆ, ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕಿಶನ್ ರಾಜ್ ಶೆಟ್ಟಿ, ನಿವೃತ್ತ ಶಿಕ್ಷಕ ಕೆ.ವಿ.ಬಾಲಚಂದ್ರ ಶೆಟ್ಟಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಉಡುಪಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ, ಟೀಚರ್ಸ್ ಕೋ.ಅಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಗಣೇಶ ಕುಮಾರ ಶೆಟ್ಟಿ, ಪೋಷಕರಾದ ಶಂಕರ ಐತಾಳ, ಅಮಾಸೆಬೈಲು ಹಾಗೂ ಸಂತೋಷ ಪೂಜಾರಿ ಉಪಸ್ಥಿತರಿದ್ದರು.

ಆರಂಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಯಾಡಿ ಸದಾರಾಮ ಶೆಟ್ಟಿ ಸ್ವಾಗತಿಸಿ, ಗೌರವಾಧ್ಯಕ್ಷ ವಕ್ವಾಡಿ ವೇಣುಗೋಪಾಲ ಹೆಗ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಶಧಿಕಾರಿ ಶೇಖರ.ಯು.ನಿವೃತ್ತ ಶಿಕ್ಷಕರ ಪಟ್ಟಿ ವಾಚಿಸಿ, ವಿ.ಸಂತೋಷ ಕುಮಾರ ಶೆಟ್ಟಿ ಕಾರ‍್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ನಾಗರಾಜ ಶೆಟ್ಟಿ ವಂದಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಗುತ್ತಿಗೆ ಆಧಾರಿತ ಸಿಬ್ಬಂದಿಗಳಾದ ಶಶಿಕುಮಾರ್, ಅಶ್ವಿನಿ, ಶೋಭಾ, ಶಿಲ್ಪಾ ಹಾಗೂ ಅಧ್ಯಾಪಕ ಪ್ರವೀಣ ಶೆಟ್ಟಿಯವರನ್ನು ಗುರುತಿಸಿ ಗೌರವಿಸಲಾಯಿತು. 2019 ನೇಯ ಸಾಲಿನಲ್ಲಿ ನಿವೃತ್ತರಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

five × 1 =