ಕುಂದಾಪುರದಲ್ಲಿ ಶ್ರೀ ಕುಂದೇಶ್ವರ ಲಕ್ಷದೀಪೋತ್ಸವ ಹಾಗೂ ರಥೋತ್ಸವ ವೈಭವ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಡಿ.03:
ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶುಕ್ರವಾರ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಹಾಗೂ ರಥೋತ್ಸವವು ವೈಭವದೊಂದಿಗೆ ನೆರವೇರಿತು. ವಾರ್ಷಿಕ ಜಾತ್ರೋತ್ಸವವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.

Call us

Click Here

Click here

Click Here

Call us

Visit Now

Click here

ಪೂರ್ವಾಹ್ನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶತರುದ್ರಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸೂರ್ಯೋದಯದಿಂದ ಸೂರ್ಯಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟದಿಂದ ಶ್ರೀ ದೇವರ ನಾಮ ಸಂಕೀರ್ತನೆ ನಡೆಯಿತು. ಸಂಜೆ ಲಕ್ಷದೀಪೋತ್ಸವ ಪ್ರಯುಕ್ತ ನೆರೆದಿದ್ದ ಅಸಂಖ್ಯ ಭಕ್ತರು ಕುಂದೇಶ್ವರ ದೇವರಿಗೆ ಹಣತೆ ದೀಪ ಬೆಳಗಿ ದೇವರ ದರ್ಶನ ಪಡೆದರು. ದೇವಳದ ಪುಷ್ಪ ರಥೋತ್ಸವ ಹಾಗೂ ಶ್ರೀ ದೇವರ ಕಟ್ಟೆಪೂಜೆ ನಡೆಯಿತು.

ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದ ಬಳಿಕ ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರತಂದು ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಿಸಲಾಯಿತು. ಕೊನೆಯ ಸುತ್ತಿನಲ್ಲಿ ಶ್ರೀ ದೇವರು ಪಲ್ಲಕ್ಕಿಯನ್ನೇರಿಸಿ ಕೊಂಡೊಯ್ಯಲಾಯಿತು.ನಂತರ ವೈಭವದ ಪುರಮೆರವಣಿಗೆಯ ನಡೆಯಿತು. ಬಗೆ-ಬಗೆಯ ಆಕರ್ಷಣೆಗಳು. ನಾಗಸ್ವರವಾದನ, ಸಾಂಪ್ರದಾಯಿಕ ವಾದ್ಯ, ಜಾನಪದ ನೃತ್ಯಗಳು ವಿಶೇಷ ಆಕರ್ಷಣೆಯಾಗಿತ್ತು. ಶ್ರೀ ದೇವರ ಉತ್ಸವ ದೇವಾಲಯದಿಂದ ಹೊರಟು, ಹೊಸ ಬಸ್ಸ್ಟಾಂಡ್ ಬಳಿ ತಿರುಗಿ, ಪುರಸಭೆಯ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಮೂಲಕ ಹಂಗ್ಳೂರು ಗೆಳೆಯರ ಬಳಗದವರೆಗೂ ಹೋಗಿ, ನಂತರ ಬೆಳಗಿನ ಜಾವ ದೇವಾಲಯದ ರಥಬೀದಿಯ ಕಡೆಗೆ ಆಗಮಿಸುತ್ತದೆ.

ಕಟ್ಟೆಪೂಜೆ: ಭಕ್ತಾದಿಗಳು ಉತ್ಸವ ಕ್ರಮಿಸುವ ಮಾರ್ಗದಲ್ಲಿ ಅಲ್ಲಲ್ಲಿ ಆಕರ್ಷಕ ವೇದಿಕೆಗಳನ್ನು ನಿರ್ಮಿಸಿ, ಅಲ್ಲಿಗೆ ಶ್ರೀ ದೇವರನ್ನು ಆಹ್ವಾನಿಸಿ, ಪೂಜೆ ನೆರವೇರಿಸಿದರು.. ಸುಮಾರು 20 ನಿಮಿಷ ಅವಧಿಯ ಈ ಕಟ್ಟೆಪೂಜೆಯಲ್ಲಿ ಭಕ್ತಾದಿಗಳಿಗೆಲ್ಲ ಪ್ರಸಾದ ವಿತರಣೆ ನಡೆಯುತ್ತದೆ. ಹೀಗೆ ಸುಮಾರು ಹದಿನಾರು ಕೇಂದ್ರಗಳಲ್ಲಿ ಕುಂದೇಶ್ವರನಿಗೆ ಕಟ್ಟೆಪೂಜೆ ನಡೆಯುತ್ತದೆ.

ಕೆರೆಯ ಸುತ್ತಲೂ ಹಚ್ಚುವ ಹಣತೆ ದೀಪದ ಬೆಳಕು ಕೆರೆಯಲ್ಲಿ ಪ್ರತಿಫಲನಗೊಂಡು ಒಂದು ಹೊಸ ಬೆಳಕಿನ ಲೋಕವನ್ನೇ ಸೃಷ್ಟಿಸುತ್ತದೆ. ನಂತರ ದೇವಾಲಯದ ಅಶ್ವತ್ಥಕಟ್ಟೆಯಲ್ಲೊಂದು ಪೂಜೆ; ಅಷ್ಟಾವಧಾನ ಸೇವೆ. ದೇವಾಲಯದ ಹೊರ ಸುತ್ತಿನಲ್ಲಿ ಮತ್ತೊಂದು ಕಟ್ಟೆಪೂಜೆ. ಪ್ರದಕ್ಷಿಣ ಪಥದಲ್ಲಿರುವ ಈಡುಗಲ್ಲಿಗೆ ಸಂಪ್ರದಾಯದಂತೆ ತೆಂಗಿನ ಕಾಯಿ ಒಡೆಯುವುದು ಮೊದಲಾದ ಸಂಪ್ರದಾಯಗಳು ನಡೆದವು.

Call us

ಕುಂದೇಶ್ವರ ದೇವಸ್ಥಾನದಲ್ಲಿ ಪ್ರವಿತಾ ಅಶೋಕ ಅವರ ತಂಡದಿಂದ ನೃತ್ಯಸಿಂಚನವು ಪ್ರೇಕ್ಷಕರನ್ನು ಮನರಂಜಿಸಿತು. ದೀಪೋತ್ಸವದ ಪ್ರಯುಕ್ತ ರಿಕ್ಷಾ ಚಾಲಕರು ಮತ್ತು ಮಾಲಕರು ಹೊಸ ಬಸ್ ನಿಲ್ದಾಣ ಕುಂದಾಪುರ ಅವರ ಸಂಯೋಜನೆಯಲ್ಲಿ ಅಭಿನವ ಕಲಾತಂಡ ಕುಂದಾಪುರ ಇವರ ರತ್ನ ಶಾಮಿಯಾನ ನಾಟಕ ಪ್ರದರ್ಶನಗೊಂಡಿತು.

ಉತ್ಸವದ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಕೃಷ್ಣಾನಂದ ಚಾತ್ರ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತೀಶ ಶೆಟ್ಟಿ, ವಿಶ್ವನಾಥ ಪೂಜಾರಿ, ನಾಗರಾಜ ರಾಯಪ್ಪನಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಹೆಚ್., ಸವಿತಾ ಜಗದೀಶ್, ಅರ್ಚಕರು, ಪದನಿಮಿತ್ತ ಅರ್ಚಕರು ಉಪಸ್ಥಿತರಿದ್ದರು.

ಕುಂದೇಶ್ವರನ ಲಕ್ಷ ದೀಪೋತ್ಸವದ ಪ್ರಯುಕ್ತ ನಗರದ ಬೀದಿಗಳು ಝಗಮಗ ದೀಪಗಳಿಂದ ಕಂಗೋಳಿಸುತ್ತಿದ್ದವು. ಕುಂದಾಪುರ ಪೇಟೆಯ ಶಾಸ್ತ್ರಿ ಸರ್ಕಲ್ನಿಂದ ಹೊಸ ಬಸ್ ನಿಲ್ದಾಣದವರೆಗಿನ ಎರಡೂ ಬದಿಗಳಲ್ಲಿಯೂ ಸಾಲು ಸಾಲು ಅಂಗಡಿಗಳಲ್ಲಿ ಗ್ರಾಹಕರಿಂದ ಖರೀದಿ ಭರಾಟೆ ಜೋರಾಗಿತ್ತು. ಅಮ್ಯೂಸ್ಮೆಂಟ್ ಪಾರ್ಕ್, ಬೃಹತ್ ತೊಟ್ಟಿಲು ಮೊದಲಾದ ಆಕರ್ಷಣೆಗಳು ಕೂಡ ಜೋರಾಗಿತ್ತು. ಮುಖ್ಯವಾಗಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಆದರೆ ಶುಕ್ರವಾರ ಮಾತ್ರ ಕುಂದೇಶ್ವರ ದೀಪೋತ್ಸವಕ್ಕೆ ವರುಣ ದೇವ ಸಹ ಕೃಪೆ ತೋರಿದ್ದು, ಭಕ್ತರಿಗೆ ಅನುಕೂಲವಾಯಿತು.

Leave a Reply

Your email address will not be published. Required fields are marked *

7 − 2 =