ಡಿ.24ರಂದು ನಾಗೂರಿನಲ್ಲಿ ಸಾಂಸ್ಕೃತಿಕ ಉತ್ಸವ – ಕುಸುಮಾಂಜಲಿ 2017

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾಗೂರು ಕುಸುಮ ಫೌಂಡೇಶನ್ ಇವರ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕುಸುಮಾಂಜಲಿ-2017’ ಡಿ.24 ಭಾನುವಾರ ನಾಗೂರಿನಲ್ಲಿ ಸಂಜೆ ಗಂಟೆ 4ಕ್ಕೆ ನಡೆಯಲಿದೆ. ವಿಶೇಷ ಅಥಿತಿಯಾಗಿ ಕಟೀಲು ಎಸ್‌ಡಿಪಿಟಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಂಪಾಲ ಪ್ರೊ. ಎಮ್. ಬಾಲಕೃಷ್ಣ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

Call us

Call us

Visit Now

‘ಕುಸುಮಾಂಜಲಿ 2017’ ರ ಪೂರ್ವಭಾವಿಯಾಗಿ ನಡೆದ ಸಂಗೀತ ಸ್ಪರ್ಧೆ ಗಾನಕುಸುಮ ಕಾರ್ಯಕ್ರಮದಲ್ಲಿ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳ ಸಂಗೀತ ಕಾರ್ಯಕ್ರಮ ಸಂಜೆ ಗಂಟೆ ೫ರಿಂದ ಆರಂಭವಾಲಿದ್ದು, ನಂತರ ಗಾನಕುಸುಮ ಪ್ರಶಸ್ತಿಯನ್ನು ನೀಡಲಾಗುವುದು. ಈ ಸಂದರ್ಭ ಕುಸುಮಾಂಜಲಿ 2017ರ ಚಾನಲ್ ಪಾರ್ಟನರ್ ಮುಂಬೈನ ಶುಭಸಾಗರ್ ಗ್ರೂಫ್ ಆಪ್ ಹೋಟೆಲ್ಸ್‌ನ ಆಡಳಿತ ನಿರ್ದೇಶಕ ಲಕ್ಷ್ಮಣ ಪೂಜಾರಿ ಕುಸುಮ ಫೌಂಡೇಶನ್ ಸಂಸ್ಥೆಯ ಒಂದು ಘಟಕವಾದ ‘ಬ್ಲೋಸಮ್ ಸ್ಕೂಲ್ ಆಪ್ ಮ್ಯೂಸಿಕ್ & ಡಾನ್ಸ್’ ಸ್ಕೂಲ್ ಉದ್ಘಾಟಿಸಲಿದ್ದಾರೆ. ಕುಸುಮಾಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ನಳಿನ್ ಕುಮಾರ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Click here

Call us

Call us

 

Leave a Reply

Your email address will not be published. Required fields are marked *

two × four =