ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಾಗೂರು ಕುಸುಮ ಫೌಂಡೇಶನ್ ಇವರ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕುಸುಮಾಂಜಲಿ’ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಿಸ್ವಾರ್ಥ ಸಾಮಾಜಿಕ ಸೇವೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ಕುಸುಮಶ್ರೀ ಪ್ರಶಸ್ತಿಯನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಡೀನ್, ನಿವೃತ್ತ ಪ್ರಾಧ್ಯಾಪಕ ಪ್ರೊ. ಎ. ವಿ ನಾವಡ ಹಾಗೂ ಜಾನಪದ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಸಂಶೋಧಕರು ವಿಮರ್ಶಕರು ಆಗಿರುವ ಡಾ. ಗಾಯತ್ರಿ ನಾವಡ ಮಂಗಳೂರು ಇವರಿಗೆ ಪ್ರದಾನ ಮಾಡಲಾಗುತ್ತಿದೆ.
ಡಿ.24 ಭಾನುವಾರ ರಾತ್ರಿ 8:30ಕ್ಕೆ ನಡೆಯುವ ‘ಕುಸುಮಾಂಜಲಿ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಬಳಿಕ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ‘ನಂದಗೋಕುಲ’ ತಂಡದವರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಕುಸುಮ ಸಂಸ್ಥೆಯ ಆಡಳಿತ ನಿರ್ದೇಶಕ ನಳಿನ್ ಕುಮಾರ್ ಶೆಟ್ಟಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಸಂಸ್ಥೆಯ ಸಲಹೆಗಾರ ವೀಗನ್ ಶಂಕರನಾರಾಯಣ, ಕುಸುಮಾಂಜಲಿ ನಿರ್ದೇಶಕಿ ರೇಷ್ಮಾ ಉಪಸ್ಥಿತರಿದ್ದರು.
► ಡಿ.24ರಂದು ನಾಗೂರಿನಲ್ಲಿ ಸಾಂಸ್ಕೃತಿಕ ಉತ್ಸವ – ಕುಸುಮಾಂಜಲಿ 2017 – http://kundapraa.com/?p=26940