ಜನನ-ಮರಣ ನೋಂದಣಿ ಪ್ರಕರಣ ಎಸಿ ಕೋರ್ಟಿಗೆ ವರ್ಗಾವಣಿ ಖಂಡಿಸಿ ಕುಂದಾಪುರ ವಕೀಲರ ಸಂಘದಿಂದ ಪ್ರತಿಭಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜನನ-ಮರಣ ನೋಂದಣಿ ಪ್ರಕರಣಗಳನ್ನು ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವ ರಾಜ್ಯ ಸರಕಾರದ ಅಧಿಸೂಚನೆಯ ವಿರುದ್ಧ ಗುರುವಾರ ಕುಂದಾಪುರ ಬಾರ್ ಅಸೋಸಿಯೇಷನ್ ಎದುರು ವಕೀಲರು ಪ್ರತಿಭಟನೆ ನಡೆಸಿದರು.

Call us

Call us

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ಮಾತನಾಡಿ, ಜನನ-ಮರಣ ನೋಂದಣಿ ಪ್ರಕರಣಗಳನ್ನು ಎಸಿ ಕೋರ್ಟಿಗೆ ವರ್ಗಾವಣೆ ಮಾಡಿದರೆ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆಯಾಗುತ್ತದೆ ಮತ್ತು ಈ ಪ್ರಕ್ರಿಯೆಯೇ ಕಾನೂನು ಬಾಹಿರವಾಗಿದೆ. ಎಸಿ ಕೋರ್ಟಿನಲ್ಲಿ ಈಗಾಗಲೇ ಇರುವ ಪ್ರಕರಣಗಳು ಮತ್ತಷ್ಟು ವಿಳಂಬವಾಗಲಿದೆ. ಸರಕಾರ ಈ ಬಗ್ಗೆ ಗಮನಹರಿಸಿ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

Call us

Call us

ಪ್ರತಿಭಟನೆಯಲ್ಲಿ ವಕೀಲರ ಸಂಘದ ಹಿರಿಯ ಕಿರಿಯ ಮಹಿಳಾ ವಕೀಲರು ಪಾಲ್ಗೊಂಡಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಬೀನಾ ಜೊಸೆಫ್, ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಮತ್ತು ಜತೆ ಕಾರ್ಯದರ್ಶಿ ರಿತೇಶ್ ಬಿ. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

11 − 4 =