ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೊರ ದೇಶ ಹಾಗೂ ರಾಜ್ಯಗಳಿಂದ ಬರುತ್ತಿರುವ ಜನರಿಗೆ ಕ್ವಾರಂಟೈನ್ ಒಳಪಡಿಸಲು ಮತ್ತು ಅವರಿಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನೆರವು ನೀಡುವುದಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ.
ಅವರು ಶುಕ್ರವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರ ಕ್ವಾರಂಟೈನ್ ನಿರ್ವಹಣೆಯ ಬಗ್ಗೆ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿ ಕ್ವಾರಂಟೈನ್ ಮಾಡುವ ಪ್ರದೇಶದಲ್ಲಿ ಮೂಲಭೂತ ಸೌಕರ್ಯ, ಉಟೋಪಚಾರ ವ್ಯವಸ್ಥೆಯ ಹಾಗೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದಿದ್ದಾರೆ.
ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಮಾಡಲು ಕೊಲ್ಲೂರಿನಲ್ಲಿ ಸಾಕಷ್ಟು ಸ್ಥಳಾವಕಾಶವಿದೆ. ಅವರೆಲ್ಲರಿಗೂ ಸರಿಯಾದ ಸೌಕರ್ಯ ದೊರೆಯುವಂತೆ ಮಾಡುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಕ್ವಾರಂಟೈನ್ ಬಗ್ಗೆ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ ವಿವರಿಸಿ, 1500ಕ್ಕೂ ಹೆಚ್ಚು ಜನ ಹೊರರಾಜ್ಯಗಳಿಂದ ಬರಲಿದ್ದಾರೆ. 26 ಲಾಡ್ಜ್‌ಗಳ ಮುಖ್ಯಸ್ಥರ ಜೊತೆ ಮಾತನಾಡಿದ್ದೇವೆ. ಲಾಡ್ಜ್‌ಗಳಲ್ಲಿ ಕ್ವಾರಂಟೈನ್ ಮಾಡಿಸಿಕೊಳ್ಳುವವರು ಅವರೇ ಹಣ ಪಾವತಿಸಬೇಕಾಗುತ್ತದೆ. ಸರ್ಕಾರಿ ಕ್ವಾರಂಟೈನ್‌ಗೆ ಊಟದ ವ್ಯವಸ್ಥೆಯನ್ನು ಆನೆಗುಡ್ಡೆ ದೇವಸ್ಥಾನ, ಕೊಲ್ಲೂರು, ಮಂದಾರ್ತಿ ದೇವಸ್ಥಾನಗಳ ಮೂಲಕ ಮಾಡಿಸಲಾಗುತ್ತದೆ ಎಂದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ಕೆ.ರಾಜು, ಎಎಸ್ಪಿ ಹರಿರಾಂ ಶಂಕರ್ ಹಾಗೂ ವಿವಿಧ ಅಧಿಕಾರಿಗಳು ಇದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕ್ವಾರಂಟೈನ್‌ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=37398 .
► ಮುಂಬೈಯಿಗರು ಉಡುಪಿ ಜಿಲ್ಲೆಗೆ ಆಗಮಿಸಲು ಅನುಮತಿ. ಸೇವಾಸಿಂಧು ಪಾಸ್, ಕ್ವಾರಂಟೈನ್ ಕಡ್ಡಾಯ – https://kundapraa.com/?p=37387 .
► ಅಂತರಾಜ್ಯ ಸಂಚಾರಕ್ಕೆ ಸೇವಾಸಿಂಧುವಿನಲ್ಲಿ ನೊಂದಣಿ ಅಗತ್ಯ – https://kundapraa.com/?p=37276 .
► ಭಟ್ಕಳದಲ್ಲಿ ಹೆಚ್ಚಿದ ಕೋರೋನಾ ಸೋಂಕು: ಜಿಲ್ಲೆಯ ಶಿರೂರು ಗಡಿಯಲ್ಲಿ ಕಟ್ಟೆಚ್ಚರ – https://kundapraa.com/?p=37403 .