ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಕ್ಕೆ ಚಾಲನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಸೆ.26:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಸೋಮವಾರಚಾಲನೆ ನೀಡಲಾಯಿತು. ಬೆಳಗ್ಗೆ 8:30 ಗಂಟೆಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು.

Call us

Call us

Visit Now

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಮಾತನಾಡಿ 9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇವಳ ಸಕಲ ಸಿದ್ಧತೆ ಮಾಡಿಕೊಂಡಿದ್ದು ಊರ- ಪರವೂರಿನಿಂದ ಭಕ್ತರಿಗೋಸ್ಕರ ವಿಶೇಷ ಸೌಕರ್ಯ ಒದಗಿಸಲಾಗಿದೆ. ಪ್ರತಿದಿನ ಶತರುದ್ರದೊಂದಿಗೆ ತಾಯಿಯ ಸನ್ನಿಧಿಯಲ್ಲಿ ಪೂಜೆ, ಸುಹಾಸನಿಯರ ಪೂಜೆ, ಚಂಡಿಕಾ ಯಾಗ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನವರಾತ್ರಿ ಸಂದರ್ಭ ನಡೆಯುತ್ತವೆ. ಪ್ರತಿದಿನ ನಡೆಯುವ ಸಾಂಸ್ಕೃತಿಕ ಉತ್ಸವದಲ್ಲಿ ಚಂಡೆ, ಸಂಗೀತ, ನೃತ್ಯ, ಯಕ್ಷಗಾನ, ಭಜನೆ ಎಲ್ಲವೂ ನಡೆಯಲಿದೆ. ವಿಜಯ ದಶಮಿಯಂದು ವಿಶೇಷವಾಗಿ ದೇವಿಗೆ ಸೇವೆಯಾಗಿ ಹುಲಿವೇಷ ನೃತ್ಯ ಇರಲಿದೆ. ಈ ಭಾರಿ ರಥೋತ್ಸವ ಅ.04ರಂದು ರಥೋತ್ಸವ ಮಧ್ಯಾಹ್ನ 1-30 ಗಂಟೆಗೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

Click here

Call us

Call us

ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ್ ಮಾತನಾಡಿ 2 ವರ್ಷ ಕೋವಿಡ್ ಇದ್ದುದರಿಂದ ವಿಭ್ರಂಭಣೆಯಿಂದ ನವರಾತ್ರಿ ಆಚರಣೆ ಸಾಧ್ಯವಾಗಿರಲಿಲ್ಲ. ಈ ಭಾರಿ ಅದ್ದೂರಿಯಾಗಿ ದೇವಿಯ ಉತ್ಸವ ನಡೆಯಲಿದೆ. ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಜನರು ಸನ್ನಿಧಿಗೆ ಭೇಟಿ ನೀಡುವ ನಿರೀಕ್ಷೆ ಇದ್ದು ಅದಕ್ಕೂ ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದರು.

ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿಗಳಾದ ಕೆ. ರಾಮಚಂದ್ರ ಅಡಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಜಯಾನಂದ ಹೋಬಳಿದಾರ್, ಡಾ. ಅತುಲ್ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಗಣೇಶ್ ಕಿಣಿ, ಸಂಧ್ಯಾ ರಮೇಶ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

6 − one =