ಜೂ.25ರಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮಂತ್ರಾಲಯ ಮಾರ್ಗದ ಸಾರಿಗೆ ಕಾರ್ಯಾಚರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಸ್ತುತ ಕೋವಿಡ್ ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮAತ್ರಾಲಯ ಮಾರ್ಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 25 ರಿಂದ ಪುನಃ ಸಾರಿಗೆಗಳ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

Call us

Call us

Call us

ಸಾರಿಗೆ ಕಾರ್ಯಾಚರಣೆಯ ವಿವರ: ಅಂಬಾರಿ ಡ್ರೀಮ್ ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಹುಬ್ಬಳ್ಳಿ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 9 ಗಂಟೆಗೆ ಹೈದ್ರಾಬಾದ್ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 5 ಗಂಟೆಗೆ ಹೈದ್ರಾಬಾದ್ನಿಂದ ಹೊರಟು ಮೆಹಬೂಬನಗರ, ರಾಯಚೂರು, ಹುಬ್ಬಳ್ಳಿ, ಕುಮಟ, ಕುಂದಾಪುರ, ಮಣಿಪಾಲ, ಉಡುಪಿ ಮಾರ್ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ತಲುಪಲಿದೆ.

Call us

Call us

ನಾನ್ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ಮ 3.30 ಕ್ಕೆ ಮಂಗಳೂರಿನಿಂದ ಹೊರಟು ಉಡುಪಿ, ಕುಂದಾಪುರ, ಸಿದ್ಧಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ ಮಾರ್ಗವಾಗಿ ಬೆಳಗ್ಗೆ 6.30 ಕ್ಕೆ ಮಂತ್ರಾಲಯ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5 ಗಂಟೆಗೆ ಮಂತ್ರಾಲಯದಿಂದ ಹೊರಟು ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತೀರ್ಥಹಳ್ಳಿ, ಸಿದ್ಧಾಪುರ, ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 7.30 ಕ್ಕೆ ಮಂಗಳೂರು ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವAತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:
► ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ: ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ – https://kundapraa.com/?p=49392 .
► ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧ – https://kundapraa.com/?p=49470 .
► ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ – https://kundapraa.com/?p=49466 .

Leave a Reply

Your email address will not be published. Required fields are marked *

20 − six =