ಮರವಂತೆ ಬಡಾಕೆರೆ ಸೊಸೈಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಮೀಟರ್, ಮಾಸ್ಕ್ ಕೊಡುಗೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಮಂಗಳವಾರ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಮೀಟರ್, ಸ್ಯಾನಿಟೈಸರ್ ಮತ್ತು ಮಾಸ್ಕ್‌ಗಳನ್ನು ನೀಡಲಾಯಿತು.

Call us

Call us

ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಮಾತನಾಡಿ, ಕೊರೋನಾ ತಡೆಗಟ್ಟುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯ ಪ್ರಮುಖವಾದುದು. ಅವರ ಸೇವೆಯನ್ನು ಗುರುತಿಸಬೇಕಾಗಿದೆ ಎಂದರು

Call us

Call us

ಈ ಸಂದರ್ಭ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಮರವಂತೆ ಗ್ರಾಮ ಪಂಚಾಯತ್ ಸದಸ್ಯ ಕರುಣಾಕರ ಆಚಾರ್ಯ, ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

3 × 3 =