ಗ್ರಾಮ ಮಟ್ಟದ ಕಾರ್ಯಪಡೆಯಿಂದ ಕೆಲವೇ ದಿನಗಳಲ್ಲಿ ರಾಜ್ಯ ಕೋವಿಡ್ ಮುಕ್ತವಾಗಲಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗ್ರಾಮ ಮಟ್ಟದಲ್ಲಿ ಪಂಚಾಯತ್ ಪ್ರತಿನಿಧಿಗಳು, ಅಧಿಕಾರಿಗಳು, ಆಶಾ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘಟಿತ ಕಾರ್ಯದಿಂದಾಗಿ ಕೆಲವೇ ದಿನಗಳಲ್ಲಿ ರಾಜ್ಯ ಕೋವಿಡ್ ಮುಕ್ತವಾಗುವ ವಿಶ್ವಾಸವಿದೆ ಎಂದು ರಾಜ್ಯ ಧಾರ್ಮಿಕ ದತ್ತಿ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Call us

Click Here

Click here

Click Here

Call us

Visit Now

Click here

ಅವರು ಬುಧವಾರ ಬೈಂದೂರು ಪಟ್ಟಣ ಪಂಚಾಯತ್, ನಾವುಂದ, ಮರವಂತೆ ಹಾಗೂ ನಾಡ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಸಭೆ ನಡೆಸಿದ ಬಳಿಕ ಮಾತನಾಡಿ ನಮ್ಮ ಗ್ರಾಮ, ವಾರ್ಡ್ ಕೋವಿಡ್ ಮುಕ್ತವಾಗಿ ಮಾಡುತ್ತೇವೆ ಎಂದು ನಿಂತರೆ ಖಂಡಿತವಾಗಿ ಕೋವಿಡ್ ನಿಯಂತ್ರಣಕ್ಕೆ ತರಲು ಸಾಧ್ಯವಿದೆ ಎಂದರು.

ಸಭೆಯಲ್ಲಿ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್., ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ವೈದ್ಯಾಧಿಕಾರಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್, ಡಾ. ನಂದಿನಿ, ಡಾ. ಸಹನಾ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

Call us

 ಇದನ್ನೂ ಓದಿ:
► ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿಯೇ ಸರಕಾರ ಈ ಅವಧಿ ಪೂರ್ಣಗೊಳಿಸಲಿದೆ: ಕೋಟ ಶ್ರೀನಿವಾಸ ಪೂಜಾರಿ – https://kundapraa.com/?p=48678 .

Leave a Reply

Your email address will not be published. Required fields are marked *

eight + 20 =