ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ: ಅಧ್ಯಕ್ಷರಾಗಿ ಮೋಹನ್ ಪೂಜಾರಿ, ಉಪಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಆಯ್ಕೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆ.30ರಂದು ಸಂಘದ ಆಡಳಿತ ಕಛೇರಿಯಲ್ಲಿ ನಡೆಯಿತು.

Call us

ಸಂಘದ ಅಧ್ಯಕ್ಷರಾಗಿ ಸಹಕಾರಿ ಧುರೀಣ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಹಾಗೂ ಟಿಎಪಿಸಿಎಮ್‌ಎಸ್ ಸಂಸ್ಥೆಯ ನಿರ್ದೇಶಕರಾದ ಮೋಹನ್ ಪೂಜಾರಿ ಉಪ್ಪುಂದ ಹಾಗೂ ಉಪಾಧ್ಯಕ್ಷರಾಗಿ ಯುವ ಉದ್ಯಮಿ ತಿಮ್ಮಪ್ಪ ಪೂಜಾರಿ ಯಡ್ತರೆ ಇವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.

ಆಯ್ಕೆ ಪ್ರಕ್ರಿಯೆ ವೇಳೆ ನೂತನ ನಿರ್ದೇಶಕರುಗಳಾದ ಸಂಘದ ಸ್ಥಾಪಕಾಧ್ಯಕ್ಷ ಹೆಚ್. ನರಸಿಂಹ ಪೂಜಾರಿ, ಬಿ. ನಾರಾಯಣ ಪೂಜಾರಿ, ಮಂಜ ಪೂಜಾರಿ, ರಾಜು ಪೂಜಾರಿ, ಸಂತೋಷ್, ಸುರೇಶ್ ಪೂಜಾರಿ, ಶೇಷು ಪೂಜಾರಿ ಹಳಗೇರಿ, ಲಕ್ಷ್ಮೀ, ಶಾರದಾ ಹಾಗೂ ಸಂಘದ ಪ್ರಧಾನ ವ್ಯವಸ್ಥಾಪಕ ಮಹೇಶ್ ಹೆಚ್. ಉಪಸ್ಥಿತರಿದ್ದರು. ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಸುನಿಲ್ ಕುಮಾರ್ ಸಿ.ಎಮ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

 

mohan poojari uppunda as new president and Timmappa Poojari as vice president of uppunda-murthedharara-seva-sahakari-sangha

Leave a Reply

Your email address will not be published. Required fields are marked *

seven − 4 =