ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇವಳದಲ್ಲಿ ಎಳ್ಳು ಅಮವಾಸ್ಯೆ ಸಂಭ್ರಮ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುವ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಸ್ಮಯಕಾರಿ ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇವಳದಲ್ಲಿ ಎಳ್ಳು ಅಮವಾಸ್ಯೆಯ ಪ್ರಯುಕ್ತ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿದವು.

Call us

Call us

Click Here

Visit Now

ದಟ್ಟ ಕಾನನದ ನಡುವೆ ಸುಮಾರು ಐವತ್ತು ಅಡಿಗಳಷ್ಟು ದೂರದ ಕಡುಗಲ್ಲು ಗುಹೆಯಲ್ಲಿನ ಶ್ರೀ ಕೇಶವನಾಥ ಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆಯಂದು ದೇವರಿಗೆ ವಿಶೇಷ ಪೂಜೆ, ಬೆಳಿಗ್ಗೆಯಿಂದ ಸಂಜೆಯತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.  ನೂರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಮಧ್ಯಾಹ್ನ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು. ಕೆರಾಡಿಯ ಶಶಿಧರ ಮಿತ್ರವೃಂದ ನೇತೃತ್ವದಲ್ಲಿ ದೇವಳಕ್ಕೆ ಆಗಮಿಸುವ ಭಕ್ತಾದಿಗಳಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಳದ ಅರ್ಚಕ ರಾಘವೇಂದ್ರ ಕುಂಜತ್ತಾಯ ಹಾಗೂ ಶಶಿಧರ ಮಿತ್ರವೃಂದದ ಸಂಚಾಲಕ ದಿವ್ಯಾಧರ ಶೆಟ್ಟಿ ಕೆರಾಡಿ ಮತ್ತವರ ತಂಡದಿಂದ ಸಕಲ ವ್ಯವಸ್ಥೆ ಮಾಡಲಾಗಿತ್ತು.

Click here

Click Here

Call us

Call us

► ಮೂಡುಗಲ್ಲು: ವಿಸ್ಮಯಕಾರಿ ಗುಹಾಂತರ ಕೇಶವನಾಥ ದೇವಾಲಯ – http://kundapraa.com/?p=1522
► ಬೆಳ್ಕಲ್ ಗೋವಿಂದ ತೀರ್ಥದಲ್ಲಿ ಎಳ್ಳಮಾವಾಸ್ಯೆ ಸಂಭ್ರಮ. ಅಸಂಖ್ಯ ಭಕ್ತರ ತೀರ್ಥಸ್ನಾನ – http://kundapraa.com/?p=20287
► ವಿಸ್ಮಯಕಾರಿ ತಾಣ ‘ಬೆಳ್ಕಲ್ ತೀರ್ಥ’ – http://kundapraa.com/?p=2297

  

Leave a Reply

Your email address will not be published. Required fields are marked *

2 × four =