ಸಂಗೀತಕ್ಕೆ ಅದ್ಭುತ ಶಕ್ತಿಯಿದೆ: ರವಿಕಿರಣ್ ಮುರ್ಡೇಶ್ವರ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ನಮ್ಮ ದೇಶ ಸ್ವಾತಂತ್ರ್ಯ ಪಡೆಯುವಲ್ಲಿ ಸಂಗೀತ ಮಹತ್ತರ ಪಾತ್ರ ವಹಿಸಿದೆ. ಸಂಗೀತಕ್ಕೆ ಅದ್ಭುತವಾದ ಶಕ್ತಿಯಿದ್ದು, ಶಾಂತಿ, ಸಾಮರಸ್ಯ, ಸಹಬಾಳ್ವೆ ನಡೆಸಲು ಸಂಗೀತ ಸಹಕಾರಿಯಾಗುತ್ತದೆ. ಬಾಲ್ಯದಲ್ಲಿಯೇ ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅವರ ಆಸಕ್ತಿಯ ಕ್ಷೇತ್ರದಲ್ಲಿ ಅವರನ್ನು ಬೆಳೆಯಲು ಬಿಡಬೇಕು. ಶಿಕ್ಷಣದ ಜೊತೆಗೆ ಪಾಠೇತರ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯರಾದರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಕುಂದಾಪುರದ ವಕೀಲ ರವಿಕಿರಣ್ ಮುರ್ಡೇಶ್ವರ ಹೇಳಿದರು.

Call us

Call us

ಶ್ರೀ ಸಿಂಗಧೂರೇಶ್ವರಿ ಡಾನ್ಸ್ ಅಕಾಡೆಮಿ ಗಂಗೊಳ್ಳಿ ಮತ್ತು ಸನ್ನಿಧಿ ಎಂಟರ್‌ಪ್ರೈಸಸ್ ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ಜರಗಿದ ವಾಯ್ಸ್ ಆಫ್ ಕರಾವಳಿ ಕೋಗಿಲೆ -೨೦೨೦ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.

ನಮ್ಮ ನಡುವೆ ಅನೇಕ ಪ್ರತಿಭೆಗಳಿದ್ದು ಅವರನ್ನು ಗುರುತಿಸಿ ಸೂಕ್ತ ವೇದಿಕೆ ನೀಡುವಲ್ಲಿ ವಿಫಲರಾಗುತ್ತಿದ್ದೇವೆ. ಹೀಗಾಗಿ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶ ಕಲ್ಪಿಸಿಕೊಟ್ಟು ಅವರ ಭವಿಷ್ಯ ನಿರ್ಮಾಣದಲ್ಲಿ ಪರಿಸರದ ಸಂಘ ಸಂಸ್ಥೆಗಳು ಕೈಜೋಡಿಸಬೇಕಿದೆ ಎಂದರು.

Call us

Call us

ಶ್ರೀ ಕ್ಷೇತ್ರ ಬೋಳಂಬಳ್ಳಿಯ ಧರ್ಮದರ್ಶಿ ಧರ್ಮರಾಜ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಶುಭಾಶಂಸನೆಗೈದರು. ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪೊಲೀಸ್ ಉಪವಿಭಾಗದ ಎಎಸ್ಪಿ ಹರಿರಾಮ್ ಶಂಕರ್, ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಉದ್ಯಮಿ ಜಗದೀಶ ಶೆಟ್ಟಿ ಮುಂಬೈ, ಸುಧಾಕರ ಆಚಾರ್ಯ ತ್ರಾಸಿ, ಉದ್ಯಮಿ ವಿನೋದ ಕುಮಾರ್ ಗುಜ್ಜಾಡಿ, ಉದ್ಯಮಿ ಪ್ರಕಾಶ ಲೋಬೊ, ಶಹಜಹಾನ್ ಹಂಗಾರಕಟ್ಟೆ, ಕೃಷ್ಣ ಪೂಜಾರಿ ಗಂಗೊಳ್ಳಿ, ಶ್ರೀ ಸಿಂಗಧೂರೇಶ್ವರಿ ಡಾನ್ಸ್ ಅಕಾಡೆಮಿ ಅಧ್ಯಕ್ಷ ಅರುಣ್ ಕುಮಾರ್ ಕೋಟೇಶ್ವರ, ಸನ್ನಿಧಿ ಎಂಟರ್‌ಪ್ರೈಸಸ್‌ನ ಮಂಜುನಾಥ ಸಾಲಿಯಾನ್ ತ್ರಾಸಿ, ಗೋಪಾಲ ಚಂದನ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಮಟ್ಟದ ಎನ್.ಸಿ.ಸಿ ಬೆಸ್ಟ್ ಕೆಡೆಟ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ವೈಷ್ಣವಿ ಗೋಪಾಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಪೊಲೀಸ್ ಠಾಣೆಯ ನಿರ್ಗಮಿತ ಎಸ್ಸೈ ವಾಸಪ್ಪ ನಾಯ್ಕ್, ಅಂತರಾಷ್ಟ್ರೀಯ ಮಟ್ಟದ ಯೋಗಪಟು ಧನ್ವಿ ಪೂಜಾರಿ, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ರಾಜ್ಯ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ಕೃಷ್ಣ ಪಟೇಲ್ ಕಂಚುಗೋಡು, ಅಬ್ದುಲ್ ವಾಹಿದ್, ಸುಂದರ ಜಿ., ಶ್ರೇಯಾ ಖಾರ್ವಿ, ನರೇಂದ್ರ ಎಸ್.ಗಂಗೊಳ್ಳಿ, ನಾಗರಾಜ ಖಾರ್ವಿ (ನಾಜು) ಅವರನ್ನು ಗೌರವಿಸಲಾಯಿತು.

ಡಾ.ವೀಣಾ ಕಾರಂತ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Leave a Reply

Your email address will not be published. Required fields are marked *

15 + seven =