ಈಜು ಸ್ವರ್ಧೆಯಲ್ಲಿ ನಾಗರಾಜ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್(ರಿ.) ಇವರು ಬೆಂಗಳೂರಿನ ಡಿ ಕ್ಯೂಬ್ ಈಜುಕೊಳದಲ್ಲಿ ನಡೆಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ ನಾಗರಾಜ ಖಾರ್ವಿ, 50 ಮೀ ಬಟರ್ ಪ್ಲೈನಲ್ಲಿ ಚಿನ್ನದ ಪದಕ, 100 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ, 50 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ
ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Call us

ನಾಗರಾಜ ಖಾರ್ವಿ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ಮಂಗಳೂರಿನ ತಣ್ಣೀರು ಬಾವಿಯ ಅರಬ್ಬೀ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು ಒಂದು ಕಿ.ಮೀ. ದೂರವನ್ನು ಕೇವಲ 25 ನಿಮಿಷ 16 ಸೆಕೆಂಡಿನಲ್ಲಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದಿದ್ದರು.

Call us

ಸಾಹಿತ್ಯದಲ್ಲೂ ಆಸಕ್ತಿ ಹೊಂದಿರುವ ಇವರು ನಾಖಾರ್ವಿ ಕಾವ್ಯನಾಮದಲ್ಲಿ ಇಬ್ಬನಿಯ ಮೆರವಣಿಗೆ, ಕಮಲ ತನಯನ ಷಟ್ಪದಿ ಎಂಬೆರಡು ಪುಸ್ತಕಗಳನ್ನು, ಪಾರ್ಥೇಶ್ವರನ ಅಂಕಿತದಲ್ಲಿ 450ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ.

ಅವರು ಬಂಟ್ವಾಳ ತಾಲೂಕಿನ ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿ.ಪಿ.ಟಿ. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

fifteen − thirteen =