ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯಲ್ಲಿ ನಿಧಿ ಕುಂಭ ಸ್ಥಾಪನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಬಾಲಾಲಯದಲ್ಲಿ ನಿಧಿ ಕುಂಭ ಸ್ಥಾಪನೆಯ ಧಾರ್ಮಿಕ ಕಾರ್ಯಕ್ರಮಗಳು ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಜರುಗಿತು.

Call us

Call us

Call us

ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ನಾಗರಾಜ ಗಾಣಿಗ ಬಂಕೇಶ್ವರ, ವಿನಾಯಕ ರಾವ್ ಮರವಂತೆ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮುತ್ತಯ್ಯ ಪೂಜಾರಿ, ಅಣ್ಣಪ್ಪ ಪೂಜಾರಿ ಯಡ್ತರೆ, ಚಂದ್ರ ಪೂಜಾರಿ, ವಾಸ್ತುಶಿಲ್ಪಿಗಳು ಮೊದಲಾದವರು ಇದ್ದರು. ಭಕ್ತಾಧಿಗಳು ಚಿನ್ನ, ಬೆಳ್ಳಿ, ಪಂಚಲೋಹ, ನವರತ್ನಗಳನ್ನು ನಿಧಿ ಕುಂಭಕ್ಕೆ ಸಮರ್ಪಿಸಿದರು.

ಕೋಟಿ ಚೆನ್ನಯ್ಯ ದೈವಗಳ ಕೊನೆಯ ಗರಡಿ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಎಪ್ರಿಲ್ 5 ರಿಂದ 13ರ ತನಕ ಜರುಗಲಿದೆ.

Leave a Reply

Your email address will not be published. Required fields are marked *

17 + nineteen =