ಮರವಂತೆ ಬಡಾಕೆರೆ ಸೊಸೈಟಿ: ಅಧ್ಯಕ್ಷರಾಗಿ ಎಸ್. ರಾಜು ಪೂಜಾರಿ ಅವಿರೋಧ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Call us

Call us

Visit Now

ಸಂಘದ ನಿರ್ದೇಶಕರುಗಳಾಗಿ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ವಾಸು ಪೂಜಾರಿ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ಎಂ. ನಾಗಮ್ಮ, ಸರೋಜಾ, ಪ್ರಕಾಶ ದೇವಾಡಿಗ, ರಾಮ ಗಾಂಧಿನಗರ, ಭೋಜ ನಾಯ್ಕ್ ಆಯ್ಕೆಯಾಗಿದ್ದು, ಅವರಿಗೆ ಪ್ರಮಾಣಪತ್ರ ವಿತರಿಸಲಾಯಿತು.

Click here

Call us

Call us

ಸತತ ಹತ್ತನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ರಾಜು ಪೂಜಾರಿ ಅವರು ಮಾತನಾಡಿ ಕಳೆದ 25 ವರ್ಷಗಳಲ್ಲಿ ಹಲವರು ಒಗ್ಗಟ್ಟಾಗಿ ಶ್ರಮಿಸಿದ್ದರಿಂದ ಸಂಸ್ಥೆ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಭವಿಷ್ಯದಲ್ಲಿಯೂ ಹಲವಾರು ಯೋಜನೆಗಳು ನಮ್ಮ ಮುಂದಿದ್ದು, ಎಲ್ಲಾ ನಿರ್ದೇಶಕರುಗಳ ಸಹಕಾರದೊಂದಿಗೆ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದ ಅವರು ಆಯ್ಕೆಯಾಗುವಲ್ಲಿ ಸಹಕರಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಅರುಣಕುಮಾರ ಎಸ್. ವಿ. ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು. ಸಂಸ್ಥೆಯ ನಿಕಟಪೂರ್ವ ನಿರ್ದೇಶಕ ಎಂ. ವಿನಾಯಕ ರಾವ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು. 

Video

Leave a Reply

Your email address will not be published. Required fields are marked *

seven − one =