ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಕೈಗೊಂಡ ವಿಶೇಷ ಕ್ರಮಗಳ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 (ಕೋರೊನ ವೈರಾಣು ಕಾಯಿಲೆ 2019) ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬoದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಕೆಳಗಿನಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

Click Here

Call us

Call us

ಕಂಟೈನ್ ಮೆಂಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು:
1) ಕಂಟೈನ್ ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ.
2) ವೈದ್ಯಕೀಯ ತುರ್ತು ಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದೆ.ಇವುಗಳ ಹೊರತು ಕಂಟೈನ್ ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ನಿಷೇಧಿಸಲಾಗಿದೆ.

Click here

Click Here

Call us

Visit Now

ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಚಟುವಟಿಕೆಗಳು:
ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು ಹೊರತು ಪಡಿಸಿ ಎಲ್ಲಾ ಚಟುವಟಿಕೆಗಳನ್ನು ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿಸಿದ , ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯವಿಧಾನಗಳ ಷರತ್ತುಗಳೊಂದಿಗೆ ನಡೆಸಲು ಅನುಮತಿಸಲಾಗಿದೆ. ಆದರೆ
1) ಸಾರ್ವಜನಿಕರಿಗೆ ಧಾರ್ಮಿಕ ಸ್ಥಳಗಳು /ಪೂಜಾ ಸ್ಥಳಗಳು .ಹೋಟೆಲ್ ಗಳು ರೆಸ್ಟೋರೆಂಟ್ ಗಳು ಮತ್ತು ಇತರ ಅತಿಥ್ಯ ಸೇವೆಗಳು. ಶಾಪಿಂಗ್ ಮಾಲ್ ಗಳು ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಆದರೆ ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಂದ ಹೊರಡಿಸಲಾದ ಮಾರ್ಗಸೂಚಿಯ (SOP) ಷರತ್ತುಗಳನ್ನು ಪಾಲಿಸತಕ್ಕದ್ದು.
2) ವಿವಾಹದ ಸಂಧರ್ಭಗಳಲ್ಲಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಂಡು ಗರಿಷ್ಟ 50 ಅತಿಥಿಗಳನ್ನು ಮಾತ್ರ ಅಹ್ವಾನಿಸತಕ್ಕದ್ದು. ಈ ಬಗ್ಗೆ ಹೊರಡಿಸಲಾದ ಸರಕಾರದ ಎಲ್ಲಾ ನಿಯಮಾವಳಿಗಳನ್ನು ಪಾಲಿಸುವುದು.
3) ಶವ ಸಂಸ್ಕಾರ / ಅಂತಿಮ ಯಾತ್ರೆಯ ಸಮಯದಲ್ಲಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಳ್ಳುವುದು ಮತ್ತು ಗರಿಷ್ಟ 20 ಜನರಿಗಿಂತ ಮೇಲೆ ಸೇರದೇ ಇರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.
4) ಸಾರ್ವಜನಿಕ ಸ್ದಳಗಳಲ್ಲಿ ಮತ್ತು ಸಾರಿಗೆಯಲ್ಲಿ ಎಲ್ಲಾ ವ್ಯಕ್ತಿಗಳು ಸಾಮಾಜಿಕ ಅಂತರವನ್ನು ಅನುಸರಿಸುವುದು.
5) ಅಂಗಡಿಗಳ ಮಾಲಕರು ಮತ್ತು ಗ್ರಾಹಕರ ನಡುವೆ ಕನಿಷ್ಟ ಆರು (6 ) ಅಡಿ ದೂರದಲ್ಲಿರುವುದನ್ನು (2 ಗಜ್ ಕಿ ದೂರಿ) ಖಚಿತಪಡಿಸಿಕೊಳ್ಳುವುದು ಮತ್ತು ಅಂಗಡಿಗಳಲ್ಲಿ 5 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಅನುಮತಿಸಬಾರದು.
6) ಬೆಳಿಗ್ಗೆ 5.00 ರಿಂದ ರಾತ್ರಿ 8.00 ರವರೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳತಕ್ಕದ್ದು ಹಾಗೂ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ರಾತ್ರಿ 8.00 ರಿಂದ ಬೆಳಿಗ್ಗೆ 5.00 ರವರೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಭಂಧಿಸಲಾಗಿದೆ. ಈ ಕರ್ಪ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
7) ಜುಲೈ 5ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳು ಅಂದರೆ ಆಗಸ್ಟ್ 2ರ ವರೆಗಿನ ಎಲ್ಲಾ ಭಾನುವಾರಗಳಂದು ಪೂರ್ಣ ದಿನದ ಲಾಕ್ ಡೌನ್ ಇರತಕ್ಕದ್ದು. ಆದರೆ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ.

ಕಂಟೈನ್ ಮೆಂಟ್ ವಲಯ ಮತ್ತು ಹೊರ ವಲಯಗಳಲ್ಲಿ ಕೋವಿಡ್ -19 ನಿರ್ವಹಣೆಗೆ ಸಂಬಂಧಿಸಿ:
1) ಸಾರ್ವಜನಿಕರು ಎಲ್ಲಾ ಸಾರ್ವಜನಿಕ ಸ್ದಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸುವುದು.
2) ಸ್ದಳೀಯ ಪ್ರಾಧಿಕಾರಗಳು ಅದರ ಕಾನೂನುಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಸಾರ್ವಜನಿಕ ಸ್ದಳಗಳಲ್ಲಿ ಉಗಿಯುವುದನ್ನು ನಿರ್ಬಂಧಿಸಿದೆ ಹಾಗೂ ಇದರ ಉಲ್ಲಂಘನೆಗಾಗಿ ನಿಗದಿಪಡಿಸಿದ ದಂಡವನ್ನು ವಿಧಿಸುವುದು.
3) ಸಾರ್ವಜನಿಕ ಸ್ದಳಗಳಲ್ಲಿ ಮಧ್ಯಪಾನ , ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಗೆ ಅವಕಾಶವಿಲ್ಲ.
4) ಬೃಹತ್ ಸಾರ್ವಜನಿಕ ಸಭೆಗಳು /ಒಟ್ಟು ಗೂಡುವಿಕೆಗಳನ್ನು ನಿಷೇಧವನ್ನು ಮುಂದುವರಿಸಿದೆ.
5) ಎಲ್ಲಾ ರಾಜಕೀಯ / ಸಾಮಾಜಿಕ /ಕ್ರೀಡಾ/ ಮನೋರಂಜನಾ/ಶೈಕ್ಷಣಿಕ /ಸಾಂಸೃತಿಕ ಮತ್ತು ಧಾರ್ಮಿಕ ಮತ್ತು ಇತರ ಜನಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಿದೆ.
6) ನಾಟಕಗಳು, ಯಕ್ಷಗಾನಗಳನ್ನು ನಡೆಸುವಂತಿಲ್ಲ ಮತ್ತು ರಂಗಮಂದಿರಗಳನ್ನು ತೆರೆಯುವಂತಿಲ್ಲ. ,
7) ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ವಾಣಿಜ್ಯ ಶಾಲೆಗಳನ್ನು, ಟ್ಯುಟೋರಿಯಲ್ಸ್ ಮತ್ತು ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡಲಾಗಿದ್ದು , ಅವುಗಳನ್ನು ತೆರೆಯತಕ್ಕದ್ದಲ್ಲ. Online / distance learningಗೆ ನಿಯಮದನ್ವಯ ಅವಕಾಶ ಕಲ್ಪಿಸಲಾಗಿದೆ.
8) ಸಿನಿಮಾ ಹಾಲ್‌ಗಳು/ ಥಿಯೆಟರ್, ಜಿಮ್ ಗಳು, ಈಜುಕೊಳಗಳು, ಮನರಂಜನಾ ಪಾರ್ಕ್ ಗಳು ,ಮತ್ತು ಅಂತಹ ಸ್ಥಳಗಳು ಬಾರ್‌ಗಳು ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್ ಗಳನ್ನು ತೆರೆಯತಕ್ಕದ್ದಲ್ಲ.
9) ಪಬ್ ಗಳು, ಕ್ಲ ಬ್ ಗಳು,ಹಾಗು ನೈಟ್ ಕ್ಲಬ್ ಗಳನ್ನು ತೆರೆಯತಕ್ಕದ್ದಲ್ಲ.
10) 65 ವರ್ಷ ಜಾಸ್ತಿ ಪ್ರಾಯದ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ಪ್ರಾಯದ ಮಕ್ಕಳು ಮತ್ತು ಗರ್ಭಿಣಿಯರು, ಅಸ್ವಸ್ಥರು, ತುರ್ತು ವೈದ್ಯಕೀಯ ಕಾರಣ ಹೊರತ್ತು ಪಡಿಸಿ ಮನೆಯಿಂದ ಹೊರಗೆ ಬರಲು ಅವಕಾಶವಿರುವುದಿಲ್ಲ.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಡಿಸಾಸ್ಟರ್ ಮ್ಯಾನೆಜ್’ಮೆಂಟ್ ಆಕ್ಟ್ 2005 , ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

Call us

ಇದನ್ನೂ ಓದಿ:
► ಉಡುಪಿ ಜಿಲ್ಲೆ ಕೋವಿಡ್ ಅಪ್ಡೇಟ್: ಸೋಮವಾರ 18 ಪಾಸಿಟಿವ್ ದೃಢ – https://kundapraa.com/?p=39077 .
► ಕುಂದಾಪುರದ ವಿವಿಧ ಕಛೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ – https://kundapraa.com/?p=39085 .

 

One thought on “ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಕೈಗೊಂಡ ವಿಶೇಷ ಕ್ರಮಗಳ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ

Leave a Reply

Your email address will not be published. Required fields are marked *

eighteen − eight =