ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಜೂ.9: ಎಂಡೋಸಲ್ಫಾನ್ ಸಂತ್ರಸ್ಥರ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ಕಳುಹಿಸಲು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎಸ್ ಅವರು ಇಂದು ಕಿರಿಮಂಜೇಶ್ವರ ಗ್ರಾಮಕ್ಕೆ ಭೇಟಿ ನೀಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಎಂಡೋಸಲ್ಫಾನ್ ಸಂತ್ರಸ್ಥರಾದ ಮಣಿಕಂಠ (8 ವರ್ಷ) ಹೆರಿಂಜಾಲು, ರೋಶನಿ (4 ವರ್ಷ), ನಾಗಮ್ಮ (25 ವರ್ಷ), ಮಹಮ್ಮದ್ ಐಯಾನ್ ಕಂಬದಕೋಣೆ (8 ವರ್ಷ), ರಂಜಿತ (21 ವರ್ಷ), ತರಣ್ (5 ವರ್ಷ), ತನ್ಮಯಿ (14 ವರ್ಷ) ಹೆರೂರು ಅವರನ್ನು ಭೇಟಿ ಮಾಡಿ ಅವರ ಕುಟುಂಬಿಕರಿಂದ ಪ್ರಸ್ತುತ ಸ್ಥಿತಿಗತಿಗಳ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಬೈಂದೂರು ತಹಸೀಲ್ದಾರ್ ಶೋಭಾ ಲಕ್ಷ್ಮಿ, ಎಸ್ಐ ಸಂಗೀತ, ಸುಕೇಶ್ ಶೆಟ್ಟಿ, ಪಿಡಿಒ ಪೂರ್ಣಿಮಾ ಶೇಟ್ ಇದ್ದರು.