ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ನಗರ ಭಾಗದಲ್ಲಿ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಮಳೆಗಾಲದಲ್ಲಿ ರಸ್ತೆ ಹೊಳೆಯಾಗುತ್ತಿದ್ದು, ನೀರು ಸರಾಗವಾಗಿ ಹರಿದು ಹೋಗದೇ ವಾಹನ ಸಂಚರಿಸುವುದು ಕಷ್ಟ ಸಾಧ್ಯವಾಗುತ್ತಿದೆ.
ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸಂಬಂಧಿತ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ಬಳಿಕ ಬಸ್ರೂರು ಮೂರುಕೈನಿಂದ ವಿನಾಯಕ ಟಾಕೀಸ್ ತನಕ ರಸ್ತೆಯಲ್ಲಿ ತಕ್ಷಣವೇ ತುರ್ತು ದುರಸ್ತಿ ಕಾರ್ಯ ಆರಂಭಿಸಲಾಯಿತು. ನೀರು ಹರಿದು ಹೋಗಲು ಚರಂಡಿಗಳಿಗೆ ಸಂಪರ್ಕ ಕಲ್ಪಿಸಲಾಯಿತು. ಶಾಸಕರು ಖುದ್ದು ನಿಂತು ಸಮಸ್ಯೆ ಸರಿಪಡಿಸಿಲು ಸೂಚಿಸಿದರು.
ಶನಿವಾರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯವರು ಸಚಿವರ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಸ್ಪಂದಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಮಸ್ಯೆಗೆ ತಾತ್ಕಾಲಿಕ ಮುಕ್ತಿ ದೊರೆಯುವಂತೆ ಮಾಡಿದ್ದರು. ಭಾನುವಾರ ಜಿಲ್ಲಾಧಿಕಾರಿಗಳು ಭೇಟಿ ನೀಡಿ ವಸ್ತುಸ್ಥಿತಿ ಪರಾಮರ್ಶಿಸಿದ್ದರು.
ಇದನ್ನೂ ಓದಿ:
► ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ – https://kundapraa.com/?p=40201 .
► ನೆರೆಪೀಡಿತ ಪ್ರದೇಶಗಳಿಗೆ ಮಾಜಿ. ಶಾಸಕ ಕೆ. ಗೋಪಾಲ ಪೂಜಾರಿ ಭೇಟಿ – https://kundapraa.com/?p=40186 .
► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 .
► ಎಸ್ಎಸ್ಎಲ್ಸಿ: ಶ್ರಾವ್ಯ ಎಸ್. ಮೊಗವೀರ ಜಿಲ್ಲೆಗೆ ದ್ವಿತೀಯ. 621 ಅಂಕ – https://kundapraa.com/?p=40194 .
► ಎಸ್.ಎಸ್.ಎಲ್ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ – https://kundapraa.com/?p=40160 .