ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 1 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. 7 ತಿಂಗಳ ಗರ್ಭೀಣಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಮುಂಬೈನಿಂದ ಮಹಿಳೆಯೊಂದಿಗೆ ಪ್ರಯಾಣಿಸಿದ ಆಕೆಯ ಗಂಡನನ್ನು ಐಸೋಲೇಶನ್ ವಾರ್ಡಿಗೆ ಶಿಫ್ಟ್ ಮಾಡಲಾಗಿದ್ದು, ಅವರು ಬಂದಿರುವ ವಾಹನದಲ್ಲಿದ್ದ ಇತರರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, ಏಳು ಮಂದಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಜಲ್ ಜೀವನ್ ಮಿಷನ್: ಜಿಲ್ಲೆಯಿಂದ 415 ಕೋಟಿ ರೂ. ಪ್ರಸ್ತಾವನೆ – https://kundapraa.com/?p=37681