ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪಿಎಸ್ಐ(ಸಿವಿಲ್) ಆಗಿ ಪವನ್ ನಾಯಕ್ ಅವರು ಗುರುವಾರ ಅಧಿಕಾರ ಸ್ವೀಕರಿದ್ದಾರೆ.
2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳದಲ್ಲಿ ಒಂದೂವರೆ ವರ್ಷಗಳ ಕಾಲ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಇದೀಗ ಬೈಂದೂರು ಠಾಣೆಯಲ್ಲಿ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಬೈಂದೂರು ಪಿಎಸ್ಐ ಆಗಿದ್ದ ಸಂಗೀತಾ ಅವರನ್ನು ಉತ್ತರ ಕನ್ನಡದ ಅಂಬಿಕಾ ನಗರ ಠಾಣೆಗೆ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಧರ್ಮಸ್ಥಳದಲ್ಲಿ ಪಿಎಸ್ಐ ಆಗಿದ್ದ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದರು.