ಅ.16ರಿಂದ ಜಿಲ್ಲೆಯಲ್ಲಿ ಮರಳು ತೆಗೆಯಲು ಅವಕಾಶ: ಸಿ.ಎಂ ಭರವಸೆ

 

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅಕ್ಟೋಬರ್ ೧೬ರಿಂದ ಮರಳು ತೆಗೆಯಲು ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಅವರು ದ.ಕ ಹಾಗೂ ಉಡುಪಿ ಜಿಲ್ಲೆಯ ಶಾಸಕರು ಹಾಗೂ ಸಂಸದರ ಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅವಕಾಶ ನೀಡುವುದರಿಂದ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬಹುದೆಂದು ಶಾಸಕರುಗಳು ಸಿಎಂಗೆ ಮನವರಿಗೆ ಮಾಡಿದ್ದರು.

ಸಿಆರ್‌ಜೆಡ್ ವ್ಯಾಪ್ತಿಯಲ್ಲಿ ಮರಳು ಲಭ್ಯತೆಯ ಬಗ್ಗೆ ಸಮೀಕ್ಷೆ ನಡೆದಿದ್ದು, ಈ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಬಳಿಕ ಮರಳು ಗಣಿಗಾರಿಕೆಯ ದರ ನಿಗದಿ ಮಾಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

three × 4 =