ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: 7 ದಿನದ ಕ್ವಾರಂಟೈನ್ ಪೂರ್ಣಗೊಳಿಸಿದ ಬಳಿಕ ಯಾವುದೇ ರೋಗದ ಲಕ್ಷಣಗಳು ಕಂಡುಬಾರದೇ ಇದ್ದಲ್ಲಿ ಅವರನ್ನು ಮನೆಗೆ ಕಳುಹಿಸಬಹುದು ಎಂಬ ರಾಜ್ಯ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ 7 ದಿನ ಸರಕಾರಿ ಕ್ವಾರಂಟೈನ್ ಪೂರೈಸಿದವರಿಗೆ 7 ದಿನ ಹೋಮ್ ಕ್ವಾರಂಟೈನ್ ಮಾಡಿ, ಸರಕಾರಿ ಕ್ವಾರಂಟೈನ್ ಕೇಂದ್ರಗಳಿಂದ ಬಿಡುಗಡೆಗೊಳಿಸಲಾಗುತ್ತಿದೆ.

Call us

Click Here

Click here

Click Here

Call us

Visit Now

Click here

14 ದಿನ ಸರಕಾರಿ ಕ್ವಾರಂಟೈನ್ ಮುಗಿಸಿದವರನ್ನು ನೇರವಾಗಿ ಮನೆಗೆ ಕಳುಹಿಸಲಾಗುತ್ತಿದ್ದು, ಇನ್ನು 14 ದಿನವೂ ಎಚ್ಚರಿಕೆಯಿಂದ ಇವವಂತೆ ಸೂಚಿಸಲಾಗಿದೆ. ರೋಗದ ಲಕ್ಷಣಗಳು ಕಂಡುಬಂದರೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಪರೀಕ್ಷೆಗೆ ಒಳಪಡುವುದು ಕಡ್ಡಾಯ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಹೋಮ್ ಕ್ವಾರಂಟೈನಿನಲ್ಲಿ ಇರುವವರು ಕ್ವಾರಂಟೈನ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಮತ್ತು ಹೋಮ್ ಕ್ವಾರಂಟೈನಿನ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಹೋಮ್ ಕ್ವಾರಂಟೈನ್ ಇರುವರರು ಮನೆಯಿಂದ ಹೊರಬಂದರೆ ಅಂತವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಎಚ್ಚರಿಸಿದ್ದಾರೆ.

ಜಿಲ್ಲೆಯ ಸರಕಾರಿ ಕ್ವಾರಂಟೈನಿನಲ್ಲಿ ಒಟ್ಟು 8,168 ಮಂದಿ ಇದ್ದು ಈ ಪೈಕಿ ಬಹುತೇಕರು 7 ದಿನದ ಕ್ವಾರಂಟೈನ್ ಮುಗಿಸಿದ್ದಾರೆ. ಹಾಗಾಗಿ ಕ್ವಾರಂಟೈನ್ ಕೇಂದ್ರಗಳ ಬಹುಪಾಲು ಮಂದಿ ಮನೆಗೆ ತೆರಳಲಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

Call us

ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ:
ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿರುವ ಬಹುತೇಕ ಮಂದಿ ಹೋಮ್ ಕ್ವಾರಂಟೈನಿಗೆ ಒಳಲಾಗಲಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಈಗಾಗಲೇ ಹೋಮ್ ಕ್ವಾರಂಟೈನಿನಲ್ಲಿದ್ದವರು ನಿಯಮ ಪಾಲಿಸದೇ ತಿರುಗಾಡಿದ ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಸರಕಾರಿ ಕ್ವಾರಂಟೈನಿನಲ್ಲಿದ್ದವರ ಬಹುತೇಕ ವರದಿಗಳು ಬರುವುದು ಬಾಕಿ ಇದೆ. ಈ ನಡುವೆ ರಾಜ್ಯ ಸರಕಾರ 7 ದಿನ ಕ್ವಾರಂಟೈನಿನಲ್ಲಿ ಇದ್ದವರಿಗೆ, ಕೋವಿಡ್ ಲಕ್ಷಣಗಳು ಇಲ್ಲದಿದ್ದರೇ, ಕೋವಿಡ್ ಪರೀಕ್ಷೆ ಅಗತ್ಯವಿಲ್ಲ ಎಂದಿದೆ. ಹೀಗೆ ಬಾಕಿ ಇರುವ ವರದಿ ಬರುವ ಮೊದಲೇ ಎಲ್ಲರನ್ನೂ ಹೋಮ್ ಕ್ವಾರಂಟೈನ್ ಮಾಡಿರುವುದು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಜನಸಾಮಾನ್ಯರದ್ದು.

ಉಡುಪಿ ಜಿಲ್ಲೆಯಲ್ಲಿ ಮೇ.28ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 27 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 147 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 143 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದನ್ನೂ ಓದಿ:
ಉಡುಪಿ ಜಿಲ್ಲೆ: ಗುರುವಾರ 27 ಪಾಸಿಟಿವ್. ಒಟ್ಟು 147ಕ್ಕೆ ಏರಿಕೆ – https://kundapraa.com/?p=37972 .
► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 .
► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

 

Leave a Reply

Your email address will not be published. Required fields are marked *

fourteen + 16 =