ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಜೂ.06:ಯಡಮೊಗೆ ಗ್ರಾಮ ಪಂಚಾಯತಿಯ ಹೊಸಬಾಳುವಿನಲ್ಲಿ ಶನಿವಾರ ರಾತ್ರಿ ನಡೆದ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತ ಯಡಮೊಗೆ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಶಂಕರನಾರಾಯಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳೂರು -74 ಗ್ರಾ.ಪಂ ಸದಸ್ಯರೊಬ್ಬರ ಮನೆಯಲ್ಲಿ ಪ್ರಾಣೇಶ್ ಯಡಿಯಾಳ್ ನನ್ನು ತಡರಾತ್ರಿ 3 ಗಂಟೆಯ ಸಮಯದಲ್ಲಿ ವಶಕ್ಕೆ ಪಡೆಯಲಾಗಿದೆ.
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಮೇಲೆ ನಿಂತಿದ್ದ ಉದಯ ಅವರ ಮೇಲೆ ಪ್ರಾಣೇಶ್ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಉದಯ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ಯತ್ನ ನಡೆಸಿದರಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.
► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 .
ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರಹ ಪ್ರಕಟಿಸಿ ಪ್ರಶ್ನಿಸುತ್ತಿದ್ದರು ಎನ್ನಲಾಗುತ್ತಿದ್ದು, ಇದರಿಂದಾಗಿಯೇ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಹಾಗೂ ಉದಯ ಮಧ್ಯೆ ವೈಯಕ್ತಿಕ ದ್ವೇಷ ಮೂಡಿತ್ತು ಎನ್ನಲಾಗಿದೆ. ಉದಯ ಗಾಣಿಗರ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಉದಯ ಗಾಣಿಗರ ಮಧ್ಯೆ ಕೊಳವೆ ಬಾವಿ ವಿಚಾರಲ್ಲಿ ಎನ್.ಓ.ಸಿಗಾಗಿ ಗಲಾಟೆ ನಡೆದಿತ್ತು. ಅಧ್ಯಕ್ಷ ಈ ಸಮಯದಲ್ಲಿ ಸಾಕಷ್ಟು ಕಿರಿಕಿರಿ ಮಾಡಿದ್ದರು. ಬಳಿಕ ಪ್ರಾಣೇಶ್ ಯಡಿಯಾಳ್ ಹಾಗೂ ಬಾಲಚಂದ್ರ ಭಟ್ ಜೊತೆಗೂಡಿ ಗಲಾಟೆ ಮಾಡಿ ಉದಯಗೆ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:
► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 .