ಅಕ್ರಮ ಗೋ ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ಬಂಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಾಸರಗೋಡಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾರಿಯನ್ನು ಶುಕ್ರವಾರ ಬೆಳಗಿನ ಜಾವ ತ್ರಾಸಿ ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ ಪೊಲೀಸರ ತಂಡ 16 ಜಾನುವಾರುಗಳನ್ನು ರಕ್ಷಿಸಿ ವಾಹನದಲ್ಲಿದ್ದ ಹಾಸನದ ನಜರುಲ್ಲಾ (43) ಹಾಗೂ ಮೈಸೂರು ಮೂಲದ ರಾಘವೇಂದ್ರ(25) ಎನ್ನುವವರನ್ನು ವಶಕ್ಕ ಪಡೆದಿದ್ದಾರೆ.

Click Here

Call us

Call us

ತ್ರಾಸಿ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಮಹಾರಾಷ್ಟ್ರ ಕೊಲ್ಲಾಪುರದಿಂದ ಮಂಗಳೂರಿಗೆ ಲಾರಿಯಲ್ಲಿ ಸಾಗಿಸುತ್ತಿದ್ದ 18 ಎತ್ತುಗಳನ್ನು ಕೊಂಡೊಯ್ಯುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರನನ್ನು ವಶಕ್ಕೆ ಪಡೆದು ವಾಹನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ಲಾರಿಯಲ್ಲಿದ್ದ ಎತ್ತುಗಳಲ್ಲಿ ಎರಡು ಎತ್ತುಗಳು ಮೃತಪಟ್ಟಿವೆ. 16 ಗೋವುಗಳನ್ನು ರಕ್ಷಿಸಲಾಗಿದೆ.

Click here

Click Here

Call us

Visit Now

ಖಚಿತ ಮಾಹಿತಿ ಆಧರಿಸಿ ತಪಾಸಣೆ ನಡೆಸಿದ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಹಾಗೂ ಬೈಂದೂರು ಸರ್ಕಲ್ ಇನಸ್ಪೆಕ್ಟರ್ ಸಂತೋಷ ಕಾಯ್ಕಿಣಿ ಹಾಗೂ ಸಿಬ್ಬಂದಿಗಳ ತಂಡದ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Call us

Leave a Reply

Your email address will not be published. Required fields are marked *

14 − four =