ಕುಂದಾಪುರ: ಬಾಲಕಿಗೆ ಅತ್ಯಾಚಾರ ಯತ್ನ, ಆರೋಪಿ ಬಂಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದ ಚಿಕನ್‌ಸಾಲ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಬಾಲಕಿಗೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಪೊಲೀಸರಿಗೆ ಅತಿಥಿಯಾದ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.

Call us

Call us

Visit Now

ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸೋಮವಾರ ಬೆಳಿಗ್ಗೆ ಬಾಲಕಿಯ ತಂದೆ ತಾಯಿ ಮನೆಯಲ್ಲಿ ಇಲ್ಲದ ಸಂದರ್ಭ ಆರೋಪಿ ಬಿಸ್ವಾಸ್ ಮನೆ ಸಮೀಪದ ಮರವೊಂದನ್ನು ಏರಿ, ಮಾಡಿನ ಹೆಂಚು ತೆಗೆದು ಒಳನುಗ್ಗಿ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದರಿಂದ ಸ್ಥಳೀಯರು ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Click here

Call us

Call us

ಬಾಲಕಿಯ ತಂದೆ ಹಾಗೂ ಬಂಗಾಳಿ ಮೂಲದ ಆಪಾದಿತ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ. ಬಿಸ್ವಾಸ್ ವಿರುದ್ದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:
► ಮಹಾಘಾತ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಕೊರೋನಾ ಪಾಸಿಟಿವ್ – https://kundapraa.com/?p=38126 .

 

 

Leave a Reply

Your email address will not be published. Required fields are marked *

15 + eighteen =