ಬಿಲ್ಲವರನ್ನು ತೆಗಳಿದವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ: ಪ್ರಶಾಂತ ಪೂಜಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಿಲ್ಲವರ ವಿರುದ್ಧ ನೇರವಾಗಿ ಕೀಳು ಮಟ್ಟದ ಪದ ಪ್ರಯೋಗಿಸಿ ವ್ಯಂಗ್ಯವಾಡಿರುವ ನೆರಂಬಳ್ಳಿ ರಾಘವೇಂದ್ರ ರಾವ್ ಅವರು ಒಂದು ವಾರದ ಒಳಗೆ ಬಹಿರಂಗವಾಗಿ ಕ್ಷೇಮ ಕೇಳಬೇಕು ಇಲ್ಲದಿದ್ದರೆ ಅವರ ವಿರುದ್ಧ ಮಾನನಷ್ಠ ಮೊಕದ್ದಮೆ ಹೂಡುವುದಲ್ಲದೇ ಪ್ರತಿಭಟನೆ ನಡೆಸುವುದಾಗಿ ಕರ್ಕಿಯ ಪ್ರಶಾಂತ ಪೂಜಾರಿ ತಿಳಿಸಿದ್ದಾರೆ.

Call us

Call us

Visit Now

Click here

Call us

Call us

ಅವರು ಕುಂದಾಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಇತ್ತಿಚಿಗೆ ಬ್ರಾಹ್ಮಣ ಮಹಾಸಭಾದ ಪತ್ರಿಕಾಗೋಷ್ಠಿಯಲ್ಲಿ ಹೋಟೆಲ್ ಉದ್ಯಮಿ ನೆರಂಬಳ್ಳಿ ರಾಘವೇಂದ್ರ ರಾವ್ ಅವರು ಬಿಲ್ಲವ ಸಮಾಜವನ್ನು ಅವಹೇಳನ ಮಾಡಿ ಮಾತನಾಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡುತ್ತಿದೆ. ಈ ಬಗ್ಗೆ ಈಗಾಗಲೇ ಕಿರಣ್ ಎನ್ನುವವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ಬಿಲ್ಲವ ಸಮಾಜಕ್ಕಾದ ಅವಮಾನವನ್ನು ಕುಂದಾಪುರ ಬಿಲ್ಲವ ಸಂಘಟನೆ ಖಂಡಿಸದೇ, ಬೇರೆವುದೋ ಸಮಾವೇಶದ ಬಗ್ಗೆ ಖಂಡನೆ ವ್ಯಕ್ತಪಡಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ.

ಈ ಹಿನ್ನೆಲೆಯಲ್ಲಿ ನೆರಂಬಳ್ಳಿ ರಾಘವೇಂದ್ರ ರಾವ್ ಅವರು ಒಂದು ವಾರದೊಳಗೆ ಬಹಿರಂಗವಾಗಿ ಕ್ಷಮೆ ಕೋರದಿದ್ದಲ್ಲಿ ಅವರ ವಿರುದ್ಧ ಮಾನನಷ್ಠ ಮೊಕದ್ದಮೆ ಹೂಡುವುದಲ್ಲದೇ ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದರು. ಈ ಸಂದರ್ಭ ಪ್ರದೀಪ ಪೂಜಾರಿ ಸಂಗಮ್, ಯೋಗೀಶ್ ಪೂಜಾರಿ ಇದ್ದರು.

Leave a Reply

Your email address will not be published. Required fields are marked *

one + 1 =