ಕತಾರ್: ವೀರ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಣೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ದೋಹಾ, ಕತಾರ್: ಫೆ.18ರ ಸಂಜೆ 7 ಘಂಟೆಗೆ ಟಿ.ಸಿ.ಎ (ಸೃಜನ ಕಲೆ) ಆವರಣದಲ್ಲಿ ಸುಮಾರು ೫೦ ಜನರು ಸೇರಿ, ಭಾರತದಲ್ಲಿ ನಡೆದ ಘೋರ ಕೃತ್ಯದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಶ್ರದ್ದಾಂಜಲಿ ಸಮರ್ಪಿಸಿದರು. ೪೦ ಸಿ.ಆರ್.ಪಿ.ಎಫ಼್ ಸೈನಿಕರ ಭಾವಚಿತ್ರದ ಎದುರು ನೆರೆದವರೆಲ್ಲರೂ ಒಬ್ಬೊಬ್ಬರಾಗಿ ಬಂದು ದೀಪ ಹತ್ತಿಸಿ, ವೀರ ಸೈನಿಕರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಕಾರ್ಯಕ್ರಮವನ್ನು ’ಗಂಧದ ಗುಡಿ’ ಎಂಬುವ ಕನ್ನಡಿಗರ ಬಳಬಳಗ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಅಯೋಜಿಸಿತ್ತು. ನೆರೆದವರಲ್ಲಿ ಕೆಲವರು ನಡೆದ ಘಟನೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಸೂರ್ಯದೇವರಿಂದ ಕರ್ಣನಿಗೆ ದೊರೆತ ಕವಚದಂತೆ ಸೈನಿಕರು ನಮ್ಮ ಭಾರತ ದೇಶ ಕವಚವಿದ್ದಂತೆ, ಉಗ್ರಗಾಮಿಗಳ ಇಂತಹ ದುಷ್ಕೃತ್ಯ ದೇಶದ ಕವಚಕ್ಕೆ ಆಘಾತವಾದಂತೆ. ಸೈನಿಕರು ನಮ್ಮ ದೇಶವನ್ನು ಕಾಪಾಡುತ್ತಿರುವರು ಎಂಬ ನಂಬಿಕೆಯಿಂದ ಎಲ್ಲರೂ ಸಕುಟುಂಬ ಸಮೇತ ಶಾಂತಿ-ನೆಮ್ಮದಿಯಿಂದ ಮಲಗಲು ಸಾಧ್ಯ. ಇಂತಹ ಭೀಕರ ಅಮಾನವೀಯ ಘಟನೆಗಳು ನಮ್ಮ ಜೀವನದಲ್ಲೆ ಮರೆಯಲಾಗದ ಗಾಯವನ್ನುಂಟು ಮಾಡುತ್ತದೆ. ಇವೆ ಮೊದಲಾದ ಅಭಿಪ್ರಾಯಗಳೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Click Here

Call us

Call us

Visit Now

Click here

Click Here

Call us

Call us

 

Leave a Reply

Your email address will not be published. Required fields are marked *

19 − nine =