ಜ.8ಕ್ಕೆ ಬೈಂದೂರಿಗೆ ಮುಖ್ಯಮಂತ್ರಿ ಭೇಟಿ ಹಿನ್ನೆಲೆ: ಪೂರ್ವಬಾವಿ ಸಭೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 8 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತು ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಕ.ರಾ.ರ.ಸಾ.ನಿಗಮದ ಅಧ್ಯಕ್ಷರು ಹಾಗೂ ಬೈಂದೂರು ಶಾಸಕ ಗೋಪಾಲ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ , ಬೈಂದೂರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸಭೆ ನಡೆಯಿತು.

Call us

Call us

ಸಭೆಯಲ್ಲಿ ಮಾತನಾಡಿದ ಶಾಸಕ ಗೋಪಾಲ ಪೂಜಾರಿ ಅವರು, ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರಥಮ ಕಾರ್ಯಕ್ರಮ ಬೈಂದೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮದ ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ಅಗತ್ಯ ಕಾರ್ಯಗಳನ್ನು, ಯಾವುದೇ ಲೋಪಗಳಿಲ್ಲದಂತೆ ಕೈಗೊಳ್ಳುವಂತೆ ಹಾಗೂ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ತಮಗೆ ವಹಿಸಿರುವ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು, ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟೋಪಚಾರ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Call us

Call us

ಸಭೆಯಲ್ಲಿ ತಾ.ಪಂ. ಸದಸ್ಯ ರಾಜು ಪೂಜಾರಿ, ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಕುಂದಾಪುರ ತಹಸೀಲ್ದಾರ್ ಜಿ.ಎಂ.ಬೋರ್ಕರ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ನಾಗಭೂಷಣ್ ಉಡುಪ, ಬೈಂದೂರು ತಹಸೀಲ್ದಾರ್ ಕಿರಣ್ ಬಿ ಗೌರಯ್ಯ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

five × 4 =