ಕೋವಿಡ್-19 ಚಿಕಿತ್ಸೆ ನೀಡಲು ಖಾಸಗಿ ಆಸ್ಪ್ಪತ್ರೆಗಳು ಸಿದ್ದವಾಗಬೇಕು: ಡಿ.ಸಿ ಜಿ. ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಗೆ ಚಿಕಿತ್ಸೆ ನೀಡಲು ನೊಂದಾಯಿಸಿಕೊAಡಿರುವ ಆಸ್ಪತ್ರೆಗಳು , ತಮ್ಮಲ್ಲಿ ಬರುವ ಕೋವಿಡ್-19 ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Call us

Call us

ಅವರು ಬುಧವಾರ,ಜಿಲ್ಲಾಧಿಕಾರಿ ಕಚೇರಿಯಲ್ಲಿ , ಕೋವಿಡ್-19 ಚಿಕಿತ್ಸೆ ನೀಡಲು ನೊಂದಾಯಿಸಿರುವ ಖಾಸಗಿ ಆಸ್ಪತ್ರೆಗಳು ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click here

Click Here

Call us

Call us

Visit Now

ಜಿಲ್ಲೆಯಲ್ಲಿ ಅಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಕೋವಿಡ್ 19 ಚಿಕಿತ್ಸೆ ನೀಡಲು 19 ಆಸ್ಪತ್ರೆಗಳು ನೊಂದಾಯಿಸಿದ್ದು, ಈ ಆಸ್ಪತ್ರೆಗಳು ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಬೆಡ್ ಗಳನ್ನು ಮೀಸಲಿಡುವುದಂತೆ ಹಾಗೂ ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳನ್ನು ಅಳವಡಿಸಿಕೊಳ್ಳುವಂತೆ ಹಾಗೂ ಅಗತ್ಯವಿರುವ ದುರಸ್ತಿ ಕಾರ್ಯಗಳನ್ನು ಕೈಗೊಂಡು ಯಾವುದೇ ಸಂದರ್ಭದಲ್ಲಿ ತಮ್ಮಲ್ಲಿಗೆ ಬರುವ ರೋಗಿಯ ಚಿಕಿತ್ಸಗೆ ಸಂಪೂಣ್ ಸಿದ್ದರಿರುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ , ಯಾವುದೇ ರೋಗಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ 108 ಪಾಸಿಟಿವ್ ಪ್ರಕರಣಗಳು ಮಾತ್ರ ಇದ್ದು, ಅವುಗಳಿಗೆ ಕುಂದಾಪುರ ಮತ್ತು ಕಾರ್ಕಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಮುಂದೆ ಪ್ರಕರಣಗಳು ಹೆಚ್ಚು ಕಂಡು ಬಂದಲ್ಲಿ ಖಾಸಗಿ ಆಸ್ಪತ್ರೆಗಳು ಸಹ ಚಿಕಿತ್ಸೆ ನೀಡಲು ಸಿದ್ದರಿರಬೇಕು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸಗೆ ಅಗತ್ಯವಿರುವ ಸೌಲಭ್ಯಗಳು ಇರುವ ಕುರಿತಂತೆ ಪರಿಶೀಲಿಸಲು ತಕ್ಷಣದಲ್ಲೇ ತಜ್ಞರ ಸಮಿತಿಯನ್ನು ರಚಿಸಲಿದ್ದು,ಈ ಸಮಿತಿಯು ಆಸ್ಪತೆಗಳಿಗೆ ಭೇಟಿ ನೀಡಿ, ಆಸ್ಪತೆçಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿ, ವರದಿ ನೀಡಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ನೊಂದಾಯಿತ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ, ಸರ್ಕಾರದ ಮಾರ್ಗಸೂಚಿಯನ್ವಯ ಕೋವಿಡ್-19 ರೋಗಿಗಳ ದಾಖಲಾತಿ ಪ್ರಕ್ರಿಯೆ, ಚಿಕಿತ್ಸಾ ವಿಧಾನಗಳ ಬಗ್ಗೆ ಹಾಗೂ ಮತ್ತಿತರ ಅಗತ್ಯ ಮಾಹಿತಿಗಳನ್ನು ನೀಡಲಾಗುವುದು ಹಾಗೂ ಖಾಸಗಿ ಆಸ್ಪತ್ರೆಯ ಸ್ವಚ್ಚತಾ ಸಿಬ್ಬಂದಿಗಳಿಗೆ ಹಾಗೂ ಇತರರಿಗೆ ಸೂಕ್ತ ತರಬೇತಿ ನೀಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಖಾಸಗಿ ಆಸ್ಪತ್ರೆಗಳು ಜ್ವರ ಪರೀಕ್ಷಾ ಕೇಂದ್ರ ಮತ್ತು ಐಸೋಲೇಶನ್ ಕೇಂದ್ರ ಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

Call us

ಪ್ರಸ್ತುತ ಜಿಲ್ಲೆಯಲ್ಲಿ , ಶ್ರೀಮಾತಾ ಆಸ್ಪತ್ರೆ ಕುಂದಾಪುರ, ನಿಟ್ಟೆ ಗಜ್ರಿಯಾ ಆಸ್ಪತ್ರೆ ಕಾರ್ಕಳ, ಆದರ್ಶ ಆಸ್ಪತ್ರೆ ಉಡುಪಿ, ನ್ಯೂಸಿಟಿ ಆಸ್ಪತ್ರೆ ಉಡುಪಿ, ಚಿನ್ಮಯಿ ಆಸ್ಪತ್ರೆ ಕುಂದಾಪುರ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಎನ್.ಆರ್. ಆಚಾರ್ಯ ಸ್ಮಾರಕ ಆಸ್ಪತ್ರೆ ಕೋಟೇಶ್ವರ, ಹೈಟೆಕ್ ಮೆಡಿಕೇರ್ ಆಸ್ಪತ್ರೆ ಉಡುಪಿ, ಮಹೇಶ್ ಆಸ್ಪತ್ರೆ ಬ್ರಹ್ಮಾವರ, ಮಿತ್ರಾ ಆಸ್ಪತ್ರೆ ಉಡುಪಿ, ಪ್ರಣವ್ ಆಸ್ಪತ್ರೆ ಬ್ರಹ್ಮಾವರ, ಸರ್ಜನ್ಸ್ ಆಸ್ಪತ್ರೆ ಕೋಟೇಶ್ವರ, ವಿವೇಕ್ ಆಸ್ಪತ್ರೆ ಕುಂದಾಪುರ, ಸ್ಪಂದನಾ ಆಸ್ಪತ್ರೆ ಕಾರ್ಕಳ, ಶ್ರೀದೇವಿ ಆಸ್ಪತ್ರೆ ಕುಂದಾಪುರ, ಶ್ರೀ ಮಂಜುನಾಥ ಆಸ್ಪತ್ರೆ ಕುಂದಾಪುರ, ಆದರ್ಶ ಆಸ್ಪತ್ರೆ ಕುಂದಾಪುರ, ಸುನಾಗ್ ಆರ್ಥೋಕೇರ್ ಅಂಡ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ, ಉಡುಪಿ, ಡಾ.ಎ.ವಿ ಬಾಳಿಗಾ ಆಸ್ಪತ್ರೆ ಉಡುಪಿ ಇವುಗಳಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆ ನೀಡಲು ಅನುಮತಿ ನೀಡಿದ್ದು, ಪ್ರಸ್ತುತ ಯಾವುದೇ ರೋಗಿಗಳು ಈ ಆಸ್ಪತ್ರೆಗಳಲ್ಲಿ ದಾಖಲಾಗಿಲ್ಲ/ಕುಂದಾಪ್ರ ಡಾಟ್ ಕಾಂ ಸುದ್ದಿ/

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಮಧುಸೂದನ ನಾಯಕ್, ಕೊವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಹಾಗೂ ಕೋವಿಡ್-19 ಗೆ ಚಿಕಿತ್ಸೆ ನೀಡಲು ನೊಂದಾಯಿಸಿಕೊAಡಿರುವ ಆಸ್ಪತ್ರೆಗಳು ಮುಖ್ಯಸ್ಥರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

4 × three =