ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊಣಾಜೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ 41ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಪ್ರೊ. ಕರುಣಾಕರ್ ಎ. ಕೋಟೆಗಾರ್ ಅವರು ತಯಾರಿಸಿದ ‘ರಾಷ್ಟ್ರೀಯ ಶಿಕ್ಷಣ ನೀತಿ- 2020’ ವೀಡಿಯೊ ಸರಣಿಯನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಆನ್‌ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭ ಕರುಣಾಕರ್ ಅವರನ್ನು ವಿವಿ ವತಿಯಿಂದ ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕೈಗಾ ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಆರ್. ಸತ್ಯನಾರಾಯಣ ಅತಿಥಿಗಳಾಗಿದ್ದರು. ಕುಲಸಚಿವ ರಾಜು ಮೊಗವೀರ ಸ್ವಾಗತಿಸಿದರು. ಪ್ರೊ. ರವಿಶಂಕರ ರಾವ್ ಮತ್ತು ಡಾ. ಧನಂಜಯ ಕುಂಬ್ಳೆ ನಿರೂಪಿಸಿದರು. ಹಣಕಾಸು ಅಧಿಕಾರಿ ಪ್ರೊ. ಬಿ. ನಾರಾಯಣ ವಂದಿಸಿದರು.