ಎಪಿಎಂಸಿ ಮಾರ್ಕೆಟ್ ಎದುರು ಚತುಷ್ಪಥ ಕಾಮಗಾರಿ ಅವ್ಯವಸ್ಥೆ: ಪ್ರತಿಭಟನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಎಪಿಎಂಸಿ ಮಾರ್ಕೆಟ್ ಯಾರ್ಡಿನ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿ ವೇಳೆ ಹೆದ್ದಾರಿಯ ಬದಿಯ ಎರಡು ಕಡೆಗಳಲ್ಲಿ ವಿಭಜಕಕ್ಕೆ ಅಳವಡಿಸಿರುವ ಕಬ್ಬಿಣದ ತಡೆ ಬೇಲಿಯಿಂದಾಗಿ ಜನರಿಗೆ ಸಮಸ್ಯೆ ಆಗುತ್ತಿದ್ದು, ಕೂಡಲೇ ತೆರವು ಮಾಡುವಂತೆ ಆಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

Call us

Call us

Visit Now

ಈ ವೇಳೆ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಶರತ್ಕುಮಾರ ಶೆಟ್ಟಿ, ಕುಂದಾಪುರ ಭಾಗದಲ್ಲಿ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿ ಅವ್ಯವಸ್ಥೆ ಬಗ್ಗೆ ಅಧಿಕಾರಿ ಗಮನಕ್ಕೆ ತಂದರೂ ಯಾವುದೇ ಸ್ಪಂದನ ಸಿಗುತ್ತಿಲ್ಲ. ಎಪಿಎಂಸಿ ಮಾರ್ಕೆಟ್ ಯಾರ್ಡ್ ಎದುರು ನಡೆವ ಕಾಮಗಾರಿಯಿಂದಾಗಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಮಾರ್ಕೆಟ್ ಯಾರ್ಡ್ ಎದುರಿನ ಹೆದ್ದಾರಿ ದಾಟಲು ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕು. ಕುಂದಾಪುರ ಸಂತೆ ಹೋಗುವುದಕ್ಕೂ ಜನ ಪರದಾಟ ನಡೆಸುವಂತಾಗಿದೆ ಎಂದು ಅವರು ಆರೋಪಿಸಿದರು.

Click Here

Click here

Click Here

Call us

Call us

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ವಿಕಾಸ ಹೆಗ್ಡೆ, ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಜನರ ಸಮಸ್ಯೆಗಳ ಬಗ್ಗೆ ಧ್ವನಿಯಾಗಬೇಕಾದ ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿದ್ದಾರೆ. ಕರಾವಳಿ ಜನರು ಶಾಂತಿ ಪ್ರೀಯರು, ಸಜ್ಜನರು ಎನ್ನುವ ಕಾರಣಕ್ಕೆ ನಿರಂತರ ಅವರ ಮೇಲೆ ಅನ್ಯಾಯ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಅಹವಾಲು ಆಲಿಸಲು ಕುಂದಾಪುರದ ಉಪ ವಿಭಾಗಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿ ಪ್ರತಿಭಟನಾಕಾರರು ಹೆದ್ದಾರಿ ತಡೆ ನಿರ್ಧಾರ ಪ್ರಕಟಿಸಿದರು. ಈ ವೇಳೆ ಪ್ರತಿಭಟನಾಕಾರರ ಮನವೂಲಿಸಿದ ಪಿಎಸ್ಐ ಹರೀಶ್ ಆರ್ ನಾಯಕ್, ಉಪ ವಿಭಾಗಾಧಿಕಾರಿ ಸ್ಥಳಕ್ಕೆ ಬರುವ ಭರವಸೆ ನೀಡಿದ್ದಾರೆ ಎಂದು ಹೇಳಿದರ ನಂತರ ನಿರ್ಧಾರ ಬದಲಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ಕೆ.ರಾಜು, ಮಾರ್ಕೆಟ್ ಯಾರ್ಡ್ನ ಬಳಿಯಲ್ಲಿ ತಡೆ ಬೇಲಿ ನಿರ್ಮಾಣದಿಂದ ಸಾರ್ವಜನಿಕರಿಗೆ ಆಗುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ಬಂದಿದೆ. ಈ ಕುರಿತು ಚತುಷ್ಪಥ ರಸ್ತೆ ಕಾಮಗಾರಿ ಗುತ್ತಿಗೆ ಕಂಪನಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಪುರಸಭೆಗೆ ಸದಸ್ಯರಾದ ಕೆ.ಜಿ.ನಿತ್ಯಾನಂದ, ದೇವಕಿ ಪಿ ಸಣ್ಣಯ್ಯ, ಅಬ್ಬು ಮಹಮ್ಮದ್, ಸಂದೀಪ್ ಖಾರ್ವಿ, ಎಪಿಎಂಸಿ ಉಪಾಧ್ಯಕ್ಷ ಗಣೇಶ್ ಶೇರುಗಾರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಎಪಿಎಂಸಿ ಸದಸ್ಯರಾದ ರಾಮರಾಯ ಕಾಮತ್, ವಸಂತ ಶೆಟ್ಟಿ ಕೆದೂರು, ಸುರೇಂದ್ರ ಕಾಂಚನ್ ಸಂಗಮ್, ರೈತ ಸಂಘದ ಸಂತೋಷ್ ಶೆಟ್ಟಿ ಬಲಾಡಿ ಮೊದಲಾದವರು. ಇದ್ದರು.

Leave a Reply

Your email address will not be published. Required fields are marked *

3 + seventeen =