ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳುವ ಸಮಯದಲ್ಲಿ ಹೆಚ್ಚುವರಿ ಬಸ್ಸುಗಳನ್ನು ನೀಯೋಜಿಸಬೇಕೆಂದು ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಕುಂದಾಪುರ ನಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದವು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಪರಿಷತ್ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಮಾತನಾಡಿ ಉಪ್ಪುಂದದ ವಿದ್ಯಾರ್ಥಿ ರಾಘವೇಂದ್ರ ಶೆಟ್ಟಿ ಅವರ ಸಾವಿಗೆ ಸಾರಿಗೆ ಇಲಾಖೆಯ ನಿರ್ಲಕ್ಷ್ಯ ದೋರಣೆಯೇ ಕಾರಣವಾಗಿದ್ದ ಶಾಲಾ ಸಮಯದಲ್ಲಿ ಅಗತ್ಯಕ್ಕನುಗುಣವಾಗಿ ಬಸ್ ಸಂಚಾರ ವ್ಯವಸ್ಥೆ ಮಾಡಿದ್ದರೇ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ ಎಂದ ಅವರು ವಿದ್ಯಾರ್ಥಿ ಕುಟುಂಬಕ್ಕೆ ಇಲಾಖೆಯಿಂದ ಪರಿಹಾರ ಘೋಷಿಸಿಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳುವ ಸಮಯದಲ್ಲಿ ಭಟ್ಕಳದಿಂದ ಕುಂದಾಪುರದ ವರೆಗೆ ಅಶವ್ಯವಿರುವಷ್ಟು ಬಸ್ ವ್ಯವಸ್ಥೆ ಮಾಡಬೇಕು. ಪಾಸ್ ಹೊಂದಿರುವ ವಿದ್ಯಾರ್ಥಿಗಳು ಕೊನೆಯಲ್ಲಿ ಬಸ್ ಹತ್ತಬೇಕು ಎಂದು ಚಾಲಕ ನಿರ್ವಾಹಕರು ತಾಕೀತು ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕುಂದಾಪುರ ಶಾಸ್ತ್ರೀವೃತ್ತದಲ್ಲಿ ಆರಂಭಗೊಂಡ ಪ್ರತಿಭಟನೆಗೆ ಮಿನಿ ವಿಧಾನಸೌಧದ ಬಳಿ ಸಮಾಪನಗೊಂಡಿತು. ಕುಂದಾಪುರ ಡಿವೈಎಸ್ಪಿ ಪ್ರವೀಣ ನಾಯಕ್ ಹಾಗೂ ತಹಶೀಲ್ದಾರರ ಮೂಲಕ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿ ಪರಿಷತ್ ಕುಂದಾಫುರ ಸಂಚಾಲಕ ಗಿರೀಶ್ ಜ.ಕೆ ಸಂಘಟಿಸಿದ್ದರು.