ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತಿ ಅಗತ್ಯ. ಸರಕಾರಿ ಶಾಲೆಗಳಲ್ಲಿ ಅವಶ್ಯವಾದ ಮೂಲಭೂತ ಸೌಕರ್ಯವನ್ನು ಒದಗಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರವೂ ಮುಖ್ಯವಾದುದು ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಹೇಳಿದರು.
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇದರ ಪ್ರತಿಭಾ ಪುರಸ್ಕಾರ 2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಾಲೆಯಲ್ಲಿ ಹಳೆವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಒಂದಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿರುವು ಸಂತಸದ ವಿಷಯ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಪಲ್ಲವಿ ಇಡೂರು, ರಾಘವೇಂದ್ರ ಉಪ್ಪುಂದ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಗ್ರಾಮಸ್ಥರಾದ ಶ್ರೀನಿವಾಸ ಉಬ್ಜೇರಿ, ಉಪ್ಪುಂದ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಶ್ರೀಗಣೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಸುಬ್ರಹ್ಮಣ್ಯ ಜಿ. ಉಪ್ಪುಂದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜರಾಮ ಭಟ್, ಎಸ್ಡಿಎಂಸಿ ಉಪಾಧ್ಯಕ್ಷೆ ಸುನಿತಾ, ತಾಯಂದಿರ ಸಮಿತಿ ಅಧ್ಯಕ್ಷೆ ಶೋಭಾ ಪುರಾಣಿಕ್, ವಿದ್ಯಾರ್ಥಿ ನಾಯಕ ಚಂದನ್ ಆರ್. ಡಿ, ವಿದ್ಯಾರ್ಥಿನಿ ನಾಯಕಿ ಶಿವಾನಿ ಮೊದಲಾದವರು ಉಪಸ್ಥಿತರಿದ್ದರು.
ನಿವೃತ್ತ ಉಪಾಧ್ಯಾಯರುಗಳಾದ ಮಹಾಬಲ ಗೌಡ ಹಾಗೂ ಭಾನುಮತಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ವೆಂಕಪ್ಪ ವರದಿ ವಾಚಿಸಿದರು. ಶಿಕ್ಷಕರಾದ ನಾರಾಯಣ ಕೆ. ಬಿಲ್ಲವ ಸ್ವಾಗತಿಸಿದರು. ರಾಘವೇಂದ್ರ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.