ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಸ್ತೆ ದಾಟುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿಯಾಗಿ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದದಲ್ಲಿ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮರವಂತೆ ನೀರೋಣಿ ಬಳಿಯ ನಿವಾಸಿ ಬಣಸಾಲು ರವೀಂದ್ರ ಖಾರ್ವಿ ಎಂಬುವರ ಮಗ ಕಿಶನ್ ಖಾರ್ವಿ (17) ಎಂದು ಗುರುತಿಸಲಾಗಿದೆ.
ಪ್ರಥಮ ಪಿಯುಸಿ ಮುಗಿಸಿರುವ ಕಿಶನ್ ಖಾರ್ವಿ ದ್ವಿತೀಯ ಪಿಯುಸಿಗೆ ಪ್ರವೇಶ ದಾಖಲಾತಿ ಮುಗಿಸಿ ಕಾಲೇಜಿನಿಂದ ಅಂಗಡಿಯೊಂದಕ್ಕೆ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿ ರಸ್ತೆ ವಿಭಾಜಕ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಿಶನ್ ಖಾರ್ವಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ನಾಯಕ್, ಪಿಎಸ್‌ಐ ಸಂಗೀತಾ ಭೇಟಿ ನೀಡಿದ್ದಾರೆ. ಗಂಗೊಳ್ಳಿ ಆಪತ್ಬಾಂದವ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಬೈಂದೂರು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/