ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಬಿ. ಎಂ. ಸುಕುಮಾರ ಶೆಟ್ಟಿ ಅವರಿಗೆ ಯಡ್ತರೆಯ ಗ್ರಾಮಸ್ಥ ಪ್ರಸಾದ್ ಬೈಂದೂರು ಅವರು ಮೊದಲ ಮನವಿ ಸಲ್ಲಿಸಲಿದ್ದಾರೆ.
ಬೈಂದೂರಿನಾದ್ಯಂತ ಇರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕರು ಶ್ರಮಿಸಬೇಕಿದ್ದು, ಶಾಶ್ವತ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಮನವಿಗೆ ಪ್ರತಿಕ್ರಿಯಿಸಿದ ನೂತನ ಶಾಸಕರು, ಬೈಂದೂರು ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಎಂದು ಭರವಸೆ ನೀಡಿದ್ದಾರೆ.