ರೋಟರಿ ಕುಂದಾಪುರ ಮಿಡ್‌ಟೌನ್: ಆರೋಗ್ಯ ಕಾರ್ಯಕರ್ತರಿಗೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ವತಿಯಿಂದ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೊರೋನಾ ವೈರಸ್ ತಡೆಗಟ್ಟಲು ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರು ಹಾಗೂ ನರ್ಸ್‌ಗಳಿಗೆ ಆರ್ಥಿಕ ನೆರವು ಒದಗಿಸುವ ಸಲುವಾಗಿ ರೂ. 20,000ವನ್ನು ದೇಣಿಗೆಯಾಗಿ ನೀಡಲಾಯಿತು.

ಈ ಸಂದರ್ಭ ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ನಳೀನ ಕುಮಾರ್, ಶಂಕರ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ಕರುಣಾಕರ ಶೆಟ್ಟಿ, ಬಶೀರ್, ನಿರಂಜನ್ ಶೆಟ್ಟಿ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳು ಇದ್ದರು.

 

Leave a Reply

Your email address will not be published. Required fields are marked *

4 × four =