ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿಗೆ ಎಸ್. ಜನಾರ್ದನ ಮರವಂತೆ ಆಯ್ಕೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ನಿವೃತ್ತ ಶಿಕ್ಷಕ ಎಸ್. ಜನಾರ್ದನ ಮರವಂತೆ ಅವರು ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Call us

Click Here

Click here

Click Here

Call us

Visit Now

Click here

ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಪ್ರತಿವರ್ಷ ಹಿರಿಯ ನಾಗರಿಕರ ದಿನಾಚರಣೆಯಂದು ಕೊಡಮಾಡುವ ಈ ಪ್ರಶಸ್ತಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಜನಾರ್ದನ ಮರವಂತೆ ಅವರನ್ನು ಆಯ್ಕೆಮಾಡಲಾಗಿದೆ. ರಾಜ್ಯದ ಒಟ್ಟು ಆರು ಮಂದಿ ಹಿರಿಯ ನಾಗರಿಕರಿಗೆ ಹಾಗೂ ಒಂದು ಸಂಸ್ಥೆಗೆ ಅ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಎಸ್. ಜನಾರ್ದನ ಮರವಂತೆ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ ಬಳಿಕ ತಮ್ಮ ನಿವೃತ್ತಿಯ ಬದುಕನ್ನು ಸಕ್ರೀಯವಾಗಿ ಕಳೆಯುತ್ತಿದ್ದಾರೆ. ರಾಜಕೀಯ, ಸಾಹಿತ್ಯ, ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ಮಾದರಿ ಕಾರ್ಯಗಳ ಮೂಲಕ ಖ್ಯಾತಿ ಗಳಿಸಿದ್ದಾರೆ. ಮರವಂತೆ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲಿ ಮರವಂತೆ ಪಂಚಾಯತ್ ಗುರುತಿಸಿಕೊಳ್ಳಲು ಮಹತ್ತರ ಪಾತ್ರ ವಹಿಸಿದ್ದರು. ಅವರು ಕರ್ನಾಟಕ ಗ್ರಾಮ ಸ್ವರಾಜ್ – ಪಂಚಾಯತ್ ರಾಜ್ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ನೂರಾರು ಉಪನ್ಯಾಸಗಳನ್ನು ನೀಡಿದ್ದಾರೆ, ಇಂದಿಗೂ ಆಡಳಿತ ಸಂಬಂಧಿ ಮಾರ್ಗದರ್ಶನ ಮಾಡುತ್ತಿದ್ದಾರೆ. ಎರಡೂವರೆ ದಶಕಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡು ಸೇವೆ ಸಲ್ಲಿಸಿದ್ದಾರೆ. ಜನಾರ್ದನ ಮರವಂತೆ ಅವರು ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಅಧ್ಯಕ್ಷರಾಗಿದ್ದರು. ಅವರ ಜನಾಧಿಕಾರ ಪುಸ್ತಕ ಮೂರು ಮುದ್ರಣಗಳನ್ನು ಕಂಡಿದೆ.

Leave a Reply

Your email address will not be published. Required fields are marked *

12 + ten =